ತೀವ್ರ ಎದೆ ನೋವಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ - Mahanayaka
8:01 PM Wednesday 11 - December 2024

ತೀವ್ರ ಎದೆ ನೋವಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ

anna hazare
26/11/2021

ಪುಣೆ: ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರಿ ಆಸ್ಪತ್ರೆಗೆ ದಾಖಲಾಗಿದ್ದು, ಇಲ್ಲಿನ ರೂಬಿ ಹಾಲ್ ಕ್ಲಿನಿಕ್ ಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಸದ್ಯ ಅವರಿಗೆ ಸಣ್ಣ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಇನ್ನೂ ಎರಡು ಮೂರು ದಿನ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದು, ಅವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ವೈದ್ಯ ಅವಧೂತ್ ಬೋದಮವಾಡ್ ತಿಳಿಸಿದ್ದಾರೆ.

84 ವರ್ಷ ವಯಸ್ಸಿನ ಅಣ್ಣಾ ಹಜಾರೆ ಅವರು ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಉಪವಾಸ ಸತ್ಯಾಗ್ರಹ ಹೋರಾಟ ನಡೆಸಿದ್ದರು. ಈ ಹಿಂದೆ ಇವರು ಲೋಕಪಾಲ್ ಮಸೂದೆ ಜಾರಿಗೊಳಿಸುವ ಸಂಬಂಧ ಹೋರಾಟ ನಡೆಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪರೀಕ್ಷೆ ಬರೆಯಲು ತೆರಳಿದ್ದ ಯುವತಿಯ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ!

ಇಬ್ಬರ ಪ್ರಾಣ ಬಲಿ ಪಡೆದ ದುಬಾರಿ ಟೊಮೆಟೋ!

“ಓ ಮಾರಿಕೊಂಡ ಮಾಧ್ಯಮಗಳೇ, ಹಂಸಲೇಖ ನೀಡಿದ್ದು ‘ವಿವಾದಾತ್ಮಕ ಹೇಳಿಕೆ’ ಅಲ್ಲ” | ಚಾಟಿ ಬೀಸಿದ ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕುಜಡ್ಕ

ಬ್ರಾಹ್ಮಣರು ಕದ್ದು ಮುಚ್ಚಿ ಮಾಂಸ ಸೇವಿಸುತ್ತಾರೆ ಎಂದಿದ್ದ ಪೇಜಾವರ ಶ್ರೀ ಮೇಲೆ ಯಾಕೆ ಕೇಸು ಹಾಕಲಿಲ್ಲ? | ಹಂಸಲೇಖ ಬೆಂಬಲಿಗರ ಪ್ರಶ್ನೆ

ವಿಚಾರಣೆಗೆ ಹಾಜರಾದ ಹಂಸಲೇಖ: ಠಾಣೆ ಎದುರು ಪರ ವಿರೋಧ ಪ್ರತಿಭಟನೆ

ಶಾಕಿಂಗ್ ನ್ಯೂಸ್: ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು

ಪೊಲೀಸ್ ಠಾಣೆಯಿಂದ ಮನೆಗೆ ಬಂದ ಯುವತಿ ಆತ್ಮಹತ್ಯೆಗೆ ಶರಣು | ಪೊಲೀಸ್ ಠಾಣೆಯಲ್ಲಿ ನಡೆದದ್ದೇನು?

ಇತ್ತೀಚಿನ ಸುದ್ದಿ