ಯಡಿಯೂರಪ್ಪ ಅವರಿಗೆ 80ನೇ ಹುಟ್ಟು ಹಬ್ಬದ ಸಂಭ್ರಮ: ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು 80ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತವಾಗಿ ಇಂದು ಅವರು ಸಂಜಯ ನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಹುಟ್ಟು ಹಬ್ಬದ ಪ್ರಯುಕ್ತ 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಗಳನ್ನು ವಿತರಿಸಿದ ಯಡಿಯೂರಪ್ಪನವರು, ಉಳಿದ ಟ್ರ್ಯಾಕ್ಟರ್ ಗಳನ್ನು ಉಳಿದ ಜಿಲ್ಲೆಗಳ ರೈತರಿಗೆ ಹಂಚಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪುತ್ರ ವಿಜಯೇಂದ್ರ, ರಾಘವೇಂದ್ರ, ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಕಾರ್ಯಕರ್ತರು ಜೊತೆಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕರ್ನಾಟಕದ 11 ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸ್: ನಿಟ್ಟುಸಿರು ಬಿಟ್ಟ ಪೋಷಕರು
ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ನಾಟಕವಾಡಿದ ಪತಿ!
ಕಾವೇರಿ ನದಿ ದಾಟುವ ವೇಳೆ ದುರಂತ: ಹಲವು ಭಕ್ತರು ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ
ಉಕ್ರೇನ್ ನಲ್ಲಿ ಅನ್ನ ನೀರಿಗಾಗಿ ಪರದಾಡುತ್ತಿರುವ ಭಾರತೀಯರು!
ನನಗೆ ಮದ್ದುಗುಂಡು ನೀಡಿ, ಪ್ರಯಾಣ ವ್ಯವಸ್ಥೆ ಬೇಡ | ಅಮೆರಿಕಕ್ಕೆ ಉಕ್ರೇನ್ ಅಧ್ಯಕ್ಷ ತಿರುಗೇಟು