ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯುವುದು ಖಚಿತವಾಗುತ್ತಿದೆ? | ಹೊಸ ಬೆಳವಣಿಗೆ ಏನು? - Mahanayaka
1:42 AM Wednesday 11 - December 2024

ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯುವುದು ಖಚಿತವಾಗುತ್ತಿದೆ? | ಹೊಸ ಬೆಳವಣಿಗೆ ಏನು?

yediyurappa
25/07/2021

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಆರಂಭವಾಗಿದ್ದು,  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಸಂಬಂಧ ಪರೋಕ್ಷ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಸಮರ್ಥಿಸಿಕೊಂಡಿದ್ದಾರೆ.

ಯಡಿಯೂರಪ್ಪನವರು ಜನಪ್ರಿಯ ನಾಯಕರಾಗಿದ್ದು, ರಾಜ್ಯದಲ್ಲಿ ಯಾವ ನಾಯಕನಿಗೂ ಸಿಗದಷ್ಟು ಅವಕಾಶಗಳು ಯಡಿಯೂರಪ್ಪನವರಿಗೆ ಸಿಕ್ಕಿದೆ.  ವಿಪಕ್ಷ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಇಷ್ಟೊಂದು ಅವಕಾಶಗಳನ್ನು ಕಾಂಗ್ರೆಸ್, ಜನತಾದಳ ಯಾವ ನಾಯಕರಿಗೂ ಅವಕಾಶ ನೀಡಿಲ್ಲ. ಆದರೆ ಬಿಜೆಪಿ ಪಕ್ಷ ಈ ಎಲ್ಲಾ ಅವಕಾಶಗಳನ್ನು ಯಡಿಯೂರಪ್ಪನವರಿಗೆ ನೀಡಿದೆ.  ಬಿಜೆಪಿ ಕಾರ್ಯಕರ್ತನಿಂದ ಹಿಡಿದು ನಾಯಕನಾಗಿ ಬೆಳೆಯುವ ಅವಕಾಶವನ್ನು ನೀಡಿದೆ ಎಂದು ಸಿ.ಟಿ.ರವಿ ಇಂದು ಹೇಳಿದ್ದಾರೆ.

ಎಲ್ಲಾ ಕಾರ್ಯಕರ್ತರ ಶಕ್ತಿಯಿಂದ ಇವತ್ತು ಬಿಜೆಪಿ ಪಕ್ಷಕ್ಕೆ ಶಕ್ತಿ ಬಂದಿದೆ. ಯಡಿಯೂರಪ್ಪ ಬಗ್ಗೆ ಸಚಿವರು, ಶಾಸಕರು ಬೇಸರದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದರ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ನೋಡಿಕೊಳ್ಳುತ್ತಾರೆ. ರಾಜಕಾರಣದಲ್ಲಿ ಇವೆಲ್ಲವೂ ಆಗುತ್ತವೆ. ಹೋಗುತ್ತವೆ. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ ಎಂದು ಟಿ.ಟಿ.ರವಿ ಹೇಳಿದ್ದಾರೆ.

ಇನ್ನೂ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ,  ರಾಜ್ಯದಲ್ಲಿ ಯಾವ ನಾಯಕರಿಗೂ ಸಿಗದಷ್ಟು ಅವಕಾಶ ನನಗೆ ಸಿಕ್ಕಿದೆ. ಪಕ್ಷದ ನಾಯಕರು ನನಗೆ ಅವಕಾಶ ಕೊಟ್ಟಿದ್ದಾರೆ. ಸಮಾಧಾನದಿಂದ ಇದ್ದೇನೆ. ಏನೂ ಆಗಲ್ಲ, ನಮ್ಮ ಪಾರ್ಟಿಯಲ್ಲಿ ಅನೇಕ ಹಿರಿಯ ನಾಯಕರಿದ್ದಾರೆ. ಕೇಂದ್ರ ನಾಯಕರ ಸೂಚನೆಯಂತೆ ನಾವೆಲ್ಲರೂ ಒಂದಾಗಿ ಕೆಲಸ ಮಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ. ನೂರು ಸಿದ್ಧರಾಮಯ್ಯನವರು ಬಂದರೂ ಪಕ್ಷ ಅಧಿಕಾರಕ್ಕೆ ತರುತ್ತೇವೆ. ಸಿ.ಟಿ ರವಿ. ಹೇಳಿದ್ದು ಸರಿ ಇದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಳು…

 

ಪ್ರೇಯಸಿಯ ಮನೆಗೆ ಬಂದಿದ್ದ ಯುವಕನನ್ನು ಥಳಿಸಿ, ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ!

ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಬುಡಕಟ್ಟು ಮಹಿಳೆಯ ಶಿರಚ್ಛೇದನ!

ಮುಖ್ಯಮಂತ್ರಿ ಬದಲಾವಣೆ: ರಾತ್ರೋ ರಾತ್ರಿ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ನಡುವೆ ರಹಸ್ಯ ಚರ್ಚೆ!

ಯುವಕನ ಲಾಕಪ್ ಡೆತ್ ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ ಗ್ರಾಮಸ್ಥರು | ಮಹಿಳಾ ಪೇದೆ ಸ್ಥಳದಲ್ಲಿಯೇ ಸಾವು

ಇತ್ತೀಚಿನ ಸುದ್ದಿ