ಯಡಿಯೂರಪ್ಪ ಮೇಲೆ ಮೃಧು ಧೋರಣೆ, ಕಾಂಗ್ರೆಸ್ ತೋರುತ್ತಿರುವ ನಾಟಕ | ಹೆಚ್.ಡಿ.ಕುಮಾರಸ್ವಾಮಿ
ರಾಮನಗರ: ಕಾಂಗ್ರೆಸ್ ನವರು ಯಡಿಯೂರಪ್ಪನವರ ಬಗ್ಗೆ ಮೃಧು ಧೋರಣೆ ತೋರುವ ನಾಟಕದ ಮೂಲಕ ಒಂದು ಸಮುದಾಯದ ಓಲೈಕೆಗೆ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದಾರೆ.
ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿ.ಎಂ. ಕುರ್ಚಿಗೆ ಟವಲ್ ಹಾಕಿರುವ ಒಬ್ಬರು, ‘ಈಗಿನ ಸಿ.ಎಂ. ಭ್ರಷ್ಟರು. ಮುಂದೆ ಬರುವವರು ಭ್ರಷ್ಟರೇ’ ಎನ್ನುತ್ತಾರೆ. ಆದರೆ ಇನ್ನೊಬ್ಬರು ಯಡಿಯೂರಪ್ಪ ಪರವಾಗಿ ಮಾತನಾಡುತ್ತಾರೆ. ಇದೆಲ್ಲ ಓಲೈಕೆಗೆ ಅಷ್ಟೇ ಎಂದರು.
ಬಿಜೆಪಿಯಿಂದ ಹೊಸ ಮುಖ್ಯಮಂತ್ರಿ ಆಯ್ಕೆ ಅವರ ಪಕ್ಷದ ಆಂತರಿಕ ವಿಚಾರ. ಇದರ ಲಾಭ ಪಡೆಯಲು ಚಿಂತನೆ ಮಾಡುವುದಿಲ್ಲ. ನಾನು ಎರಡು ಬಾರಿ ಅದೃಷ್ಟದಿಂದ ಮುಖ್ಯಮಂತ್ರಿ ಆದೆ. ಮುಂದೆಯೂ ತಾಯಿ ಚಾಮುಂಡೇಶ್ವರಿ ಅಧಿಕಾರ ಕೊಡುವ ವಿಶ್ವಾಸ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನಷ್ಟು ಸುದ್ದಿಗಳು…
ಏರೆಗ್ಲಾ ಪನೋಡ್ಚಿ…! | “ನಳಿನ್ ಕುಮಾರ್ ಆಡಿಯೋ ಮಿಮಿಕ್ರಿ ಆರ್ಟಿಸ್ಟ್ ಯಾರೆಂದು ತಿಳಿಯಿತು”
ಷಡ್ಯಂತ್ರಗಳ ಬಾಣಗಳ ಹಾಸಿಗೆಯಲ್ಲಿ ಯಶಸ್ವಿಯಾಗಿ ಭೀಷ್ಮನನ್ನು ಮಲಗಿಸಿಬಿಟ್ಟಿರಿ!
ಯಡಿಯೂರಪ್ಪ ಕಣ್ಣೀರು ನೋಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ರಾಜಾಹುಲಿ!
ವಿಲನ್ ಗಳಾದರು ಹೈಕಮಾಂಡ್! | ಲಿಂಗಾಯತ ನಾಯಕನನ್ನು ಅವಮಾನಿಸಿ ಕೆಳಗಿಳಿಸಿದ್ಯಾಕೆ?
ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದ ಯುವಕನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಪತಿ!