“ಯಡಿಯೂರಪ್ಪನವರೇ ಸಿಎಂ ಆಗಿರಲಿ” | ಯಡಿಯೂರಪ್ಪರ ಋಣ ತೀರಿಸಿದ ಸ್ವಾಮೀಜಿಗಳು - Mahanayaka
8:11 PM Wednesday 11 - December 2024

“ಯಡಿಯೂರಪ್ಪನವರೇ ಸಿಎಂ ಆಗಿರಲಿ” | ಯಡಿಯೂರಪ್ಪರ ಋಣ ತೀರಿಸಿದ ಸ್ವಾಮೀಜಿಗಳು

bjp swamiji
20/07/2021

ಬೆಂಗಳೂರು:  ರಾಜ್ಯದಲ್ಲಿ ನಾಯತ್ವ ಬದಲಾವಣೆ ಖಚಿತ ಎನ್ನಲಾಗುತ್ತಿರುವ ಬೆನ್ನಲ್ಲೇ 35 ಸ್ವಾಮೀಜಿಗಳು  ಬಿ.ಎಸ್.ಯಡಿಯೂರಪ್ಪನವರಿಗೆ ಬೆಂಬಲವಾಗಿ ನಿಂತಿದ್ದು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು 35 ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಭೇಟಿಯಾಗುವ ಮೂಲಕ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.  ಈ ವೇಳೆ ಯಡಿಯೂರಪ್ಪನವರು ಸ್ವಾಮೀಜಿಗಳ ಜೊತೆಗೆ ನಗುನಗುತ್ತಾ ಮಾತನಾಡಿದ್ದಾರೆ.

ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಈ ವೇಳೆ ಯಡಿಯೂರಪ್ಪನವರು ಹೇಳಿದ್ದಾರೆ. ಈ ವೇಳೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರು ಕಾರಣ. ಬಿಎಸ್ ವೈ ಪಕ್ಷವನ್ನು ಕೆಳಮಟ್ಟದಿಂದ ಮೇಲಕ್ಕೆ ತಂದಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡಬಾರದು ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಸಿಎಂ ಯಡಿಯೂರಪ್ಪನವರು ಪ್ರತಿ ಬಾರಿ ಸಿಎಂ ಆದ ಸಂದರ್ಭದಲ್ಲಿಯೂ ಮಠಗಳಿಗೆ ಭರ್ಜರಿ ಅನುದಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಸಿಎಂ ಯಡಿಯೂರಪ್ಪನವರ ಋಣ ತೀರಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಶಿಲ್ಪಾ ಶೆಟ್ಟಿಯ ಗಂಡ ಹಣ ಮಾಡಿದ್ದು ಹೇಗೆ? | ರಾಜ್ ಕುಂದ್ರಾ ಬಂಧನದ ಬೆನ್ನಲ್ಲೇ ವಿಡಿಯೋ ವೈರಲ್

“ನಾಯಕತ್ವ ಬದಲಾವಣೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್!”

ಭರ್ಜರಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ | ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು?

ಪತಿವ್ರತೆ ಎಂದು ಸಾಬೀತು ಪಡಿಸಲು ಮಹಿಳೆಯನ್ನು ಕುದಿಯುವ ಎಣ್ಣೆಗೆ ಕೈ ಹಾಕಿಸಿದರು!

ಇತ್ತೀಚಿನ ಸುದ್ದಿ