ಏಕಾಏಕಿ ಹೊತ್ತಿ ಉರಿದ ಹಾಸಿಗೆ ಅಂಗಡಿ
20/09/2022
ಬೆಳ್ತಂಗಡಿ; ಉಜಿರೆಯ ಮುಖ್ಯ ಪೇಟೆಯ ಚಾರ್ಮಾಡಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದಾಸ್ತಾನು ಇರಿಸಿದ್ದ ಹತ್ತಿಗೆ ಬೆಂಕಿ ತಗುಲಿ ಕಟ್ಟಡಕ್ಕೆ ಬೆಂಕಿ ಆವರಿಸಿದ ಘಟನೆ ಮಂಗಳವಾರ ಮದ್ಯಾಹ್ನ ಸಂಭವಿಸಿದೆ.
ಸಮೀಪದ ತರಕಾರಿ, ಮೊಬೈಲ್, ಜ್ಯೂಸ್ ಹಾಗೂ ಬಟ್ಟೆ ಅಂಗಡಿಗಳಿಗೆ ಬೆಂಕಿ ಆವರಿಸಿ ಲಕ್ಷಾಂತರ ಮೌಲ್ಯದ ಸೊತ್ತು ನಾಶವಾಗಿದೆ. ಬೆಂಕಿ ಕಾಣಿಸಿಕೊಂಡಿರುವುದನ್ನು ತಕ್ಷಣವೇ ಸ್ಥಳೀಯರು ಗಮನಿಸಿದ್ದು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿನಂದಿಸುವ ಕಾರ್ಯ ಮಾಡಿದ್ದಾರೆ ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka