ಎಲ್ಲಾ ಕಡೆ ವೀಕೆಂಡ್ ಕರ್ಫ್ಯೂ ಯಾಕೆ? | ಸರ್ಕಾರದ ನಿರ್ಧಾರದ ಬಗ್ಗೆ ಸಚಿವ ಈಶ್ವರಪ್ಪ ಅಸಮಾಧಾನ
ಶಿವಮೊಗ್ಗ: ಕೊವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿದೆ. ಪ್ರಕರಣ ಕಡಿಮೆ ಇರುವ ಜಿಲ್ಲೆಗಳಲ್ಲಿಯೂ ಯಾಕೆ ವೀಕೆಂಡ್ ಕರ್ಫ್ಯೂ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಮಾಧ್ಯಮಗಳ ಜೊತೆಗೆ ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ನಿಜ. ಆದರೆ, ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಇಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚೆಂದರೆ 10 ಪ್ರಕರಣಗಳ ವರೆಗೆ ಇದೆ. ಇಲ್ಲಿ ಕೂಡ ವೀಕೆಂಡ್ ಕರ್ಫ್ಯೂ ಯಾಕೆ ಬೇಕು ಎಂದು ಅವರು ಪ್ರಶ್ನಿಸಿದರು.
ಈ ಬಗ್ಗೆ ನನಗೆ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣೆಗೆರೆ ಹೀಗೆ ಎಲ್ಲಾ ಕಡೆಗಳಿಂದ ಕರೆ ಮಾಡಿ ಜನರು ಪ್ರಶ್ನಿಸುತ್ತಿದ್ದಾರೆ. ನೀವು ಬೆಂಗಳೂರನ್ನು ಬಿಗಿ ಮಾಡಿ, ನಾವು ಯಾವುದೇ ಖರೀದಿಗೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ವ್ಯಾಪಾರಸ್ಥರು ಕೂಡ ಹೇಳುತ್ತಿದ್ದಾರೆ.
ಇನ್ನೊಂದೆಡೆ ವಿದ್ಯಾರ್ಥಿಗಳಿಗೆ ಕೂಡ ತೊಂದರೆಯಾಗುತ್ತಿದೆ. ಶಾಲೆಗೆ ಹೋಗಲು ಅವಕಾಶ ಕೊಡಿ ಎಂದು ಜನ ಕೇಳುತ್ತಿದ್ದಾರೆ. ಮಾಸ್ಕ್ ಧರಿಸುತ್ತೇವೆ, ಸ್ಯಾನಿಟೈಸರ್ ಬಳಸುತ್ತೇವೆ, ದೈಹಿಕ ಅಂತರ ಕಾಪಾಡಿಕೊಳ್ಳುತ್ತೇವೆ ನಮಗೆ ತೊಂದರೆ ಕೊಡಬೇಡಿ ಎಂದು ಎಲ್ಲರು ಕೇಳುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಇನ್ನೂ ಈ ಸಂಬಂಧ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಮುಖ್ಯಮಂತ್ರಿಗಳು ಹಾಗೂ ಉಳಿದವರ ಜೊತೆಗೆ ಮಾತನಾಡುತ್ತೇನೆ. ಇಂತಹ ಸಲಹೆಯನ್ನು ನಾಳೆ ಕೊಡುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ!
ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ!
ಮಂಗಳೂರು ವಿವಿ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ: ಕ್ಯಾಂಪಸ್ ಫ್ರಂಟ್