ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು | ಕ್ಷಮೆಯಾಚಿಸಿದ ಹಂಸಲೇಖ
ಬೆಂಗಳೂರು: ಜಾತಿ ತಾರತಮ್ಯ ಹಾಗೂ ಅಸ್ಪೃಶ್ಯತೆ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನಿಟ್ಟುಕೊಂಡು ವಿವಾದ ಸೃಷ್ಟಿಸಲಾಗಿದ್ದು, ಇದೇ ವೇಳೆ ಈ ವಿವಾದವನ್ನು ಮುಂದುವರಿಸಲು ಇಚ್ಛಿಸದೇ ಹಂಸಲೇಖ ಅವರು ಕ್ಷಮೆಯಾಚಿಸಿದ್ದಾರೆ.
ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ಹಂಸಲೇಖ ಹೇಳಿದ್ದಾರೆ.
ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡ್ತೇನೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಎಚ್ಚರ…! ನೀವು ನಿದ್ದೆ ಕೆಡುತ್ತಿದ್ದೀರಾ? | ಹಾಗಿದ್ದರೆ ಈ ವಿಚಾರವನ್ನು ತಿಳಿದುಕೊಳ್ಳಲೇ ಬೇಕು!
ದಲಿತರ ಮನೆಗೆ ಪೇಜಾವರ ಶ್ರೀ ಬರಬಹುದು ಆದ್ರೆ ಕೋಳಿ ತಿನ್ನಕ್ಕಾಗುತ್ತಾ? | ಹಂಸಲೇಖ ಪ್ರಶ್ನೆಗಳ ಬಾಣ
ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರು
ದೇವರ ಪ್ರಸಾದ ಸೇವಿಸಿ ವಾಂತಿ ಭೇದಿ | 25ರಿಂದ 30 ಭಕ್ತರು ಅಸ್ವಸ್ಥ
ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ
ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಕ್ಯಾಟರಿಂಗ್ ಮುಗಿಸಿ ಬರುತ್ತಿದ್ದ ಇಬ್ಬರು ಯುವಕರ ದಾರುಣ ಸಾವು!
ದೇಶ ವಿಭಜನೆಯಾಗಲು ಅಂದಿನ ಕಾಂಗ್ರೆಸ್ ನಾಯಕರೇ ಕಾರಣ | ಅಸಾದುದ್ದಿನ್ ಓವೈಸಿ ಗುಡುಗು