ಎಲ್ಲರೂ ಹಿಂದಿಯಲ್ಲಿ ಮಾತನಾಡಬೇಕೆಂದ ಅಮಿತ್ ಶಾ!
ವಿವಿಧ ರಾಜ್ಯದ ಜನರು ಇಂಗ್ಲಿಷ್ ಮಾತನಾಡುವ ಬದಲು ಹಿಂದಿಯಲ್ಲಿ ಮಾತನಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. ಇದು ದೇಶದ ಏಕತೆಗೆ ಮುಖ್ಯವಾಗಿದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.
ಹಿಂದಿಯನ್ನು ಆಡಳಿತ ಭಾಷೆಯನ್ನಾಗಿ ಮಾಡಲು ಪ್ರಧಾನಿ ನೇತೃತ್ವದಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಭಾಷೆಯ ಮಹತ್ವ ಹೆಚ್ಚಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
9 ನೇ ತರಗತಿಯವರೆಗಿನ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಹಿಂದಿಯ ಮೂಲಭೂತ ಜ್ಞಾನವನ್ನು ನೀಡಬೇಕು. ಹಿಂದಿ ಪರೀಕ್ಷೆಗಳಿಗೆ ಹೆಚ್ಚಿನ ಗಮನ ನೀಡಬೇಕು. 70 ರಷ್ಟು ಕ್ಯಾಬಿನೆಟ್ ಅಜೆಂಡಾ ಈಗ ಹಿಂದಿಯಲ್ಲಿ ಸಿದ್ಧವಾಗಿದೆ.
ಈಶಾನ್ಯದಲ್ಲಿ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಮತ್ತು ಈ ಪ್ರದೇಶದ ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಭಾಷೆಯ ಲಿಪಿಗಳನ್ನು ದೇವನಾಗರಿಗೆ ಅನುವಾದಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ ಅವರು ಈ ಹಿಂದೆ ‘ಒಂದು ರಾಷ್ಟ್ರ, ಒಂದು ಭಾಷೆ’ ಕಲ್ಪನೆಯನ್ನು ಮುಂದಿಟ್ಟಿದ್ದರು. ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಯತ್ನಿಸುತ್ತಿದೆ ಎಂಬ ದೂರುಗಳ ನಡುವೆಯೇ ಅಮಿತ್ ಶಾ ಇತ್ತೀಚಿನ ಹೇಳಿಕೆ ಮಹತ್ವ ಪಡೆದಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳು ಈಗಾಗಲೇ ಕೇಂದ್ರವನ್ನು ಕಟುವಾಗಿ ಟೀಕಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅರಣ್ಯಾಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕೇಸು | ಸೇಡಿಗಾಗಿ ದಲಿತ ದೌರ್ಜನ್ಯ ತಡೆ ಕಾಯ್ದೆ ದುರುಪಯೋಗವೇ?
ಶಾರೂಖ್ ಖಾನ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿರುವ ನಯನತಾರಾ
ಶಾಲೆಯ ಬಳಿ ಗುಂಡಿನ ದಾಳಿ: ಓರ್ವ ವಿದ್ಯಾರ್ಥಿ ಸಾವು
ಯೋಗಿ ಆದಿತ್ಯನಾಥ್ ಟ್ವಿಟ್ಟರ್ ಪ್ರೊಫೈಲ್ ನಲ್ಲಿ ಕಾರ್ಟೂನ್! | ರಾತ್ರೋ ರಾತ್ರಿ ನಡೆದದ್ದೇನು?
ಅಸಾರಾಂ ಬಾಪು ಬೆಂಬಲಿಗರ ಆಶ್ರಮದ ಬಳಿ ಬಾಲಕಿಯ ಮೃತದೇಹ ಪತ್ತೆ!