ಎಮ್ಮೆ ಮೇಯಿಸುತ್ತಿದ್ದ ವೇಳೆ ಅತ್ಯಾಚಾರಕ್ಕೆ ಯತ್ನ | ಕಾಮುಕರಿಂದ ಮಹಿಳೆಯನ್ನು ರಕ್ಷಿಸಿದ ಎಮ್ಮೆ - Mahanayaka

ಎಮ್ಮೆ ಮೇಯಿಸುತ್ತಿದ್ದ ವೇಳೆ ಅತ್ಯಾಚಾರಕ್ಕೆ ಯತ್ನ | ಕಾಮುಕರಿಂದ ಮಹಿಳೆಯನ್ನು ರಕ್ಷಿಸಿದ ಎಮ್ಮೆ

haveri
30/06/2021


Provided by

ಹಾವೇರಿ:  ಎಮ್ಮೆ ಮೇಯಿಸುತ್ತಿದ್ದ ಮಹಿಳೆಯು ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯ ಜೊತೆಗಿದ್ದ ಎಮ್ಮೆ ಅತ್ಯಾಚಾರಿಗಳನ್ನು ಅಟ್ಟಾಡಿಸಿಕೊಂಡು ಹೋಗಿ ಮಹಿಳೆಯನ್ನು ರಕ್ಷಿಸಿದ ಘಟನೆ ಸವಣೂರು ತಾಲೂಕಿನ ಹೀರೇಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಿರೇಮರಳಿಹಳ್ಳಿ ಗ್ರಾಮದ ಬಸವರಾಜ ಗಾಳೆಪ್ಪ ದಂಡಿನ್ ಹಾಗೂ ಪರಶುರಾಮ ತಮ್ಮಣ್ಣ ಹಟ್ಟಿ  ಎಂಬ ಆರೋಪಿಗಳು ಸಂತ್ರಸ್ತ ಮಹಿಳೆಯು ಹಿರೇಮರಳಿಹಳ್ಳಿ ಗ್ರಾಮದ ತಮ್ಮ ಜಮೀನಿನ ಬದುವಿನ ಹತ್ತಿರವಿರುವ ನೀಲಗಿರಿ ತೋಪಿನಲ್ಲಿ ದನ ಮೇಯಿಸುತ್ತಿದ್ದಾಗ ಬಸವರಾಜ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆನ್ನಲಾಗಿದೆ.

ಈತನಿಂದ ಮಹಿಳೆ ತಪ್ಪಿಸಿಕೊಳ್ಳಲು ಮಹಿಳೆ ಓಡಿದಾಗ ಪರಶುರಾಮ ಎದುರಿನಿಂದ ಬಂದು ಮಹಿಳೆಗೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಹಿಳೆ ಪ್ರತಿಭಟಿಸಿದಾಗ ಆರೋಪಿಗಳು ಆಕೆಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಎಮ್ಮೆ ತನ್ನ ಮಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿರುವವರನ್ನು ಅಟ್ಟಾಡಿಸಿ ಓಡಿಸಿದೆ ಎಂದು ವರದಿಯಾಗಿದೆ.

ಪ್ರಾಣಾಪಾಯದಿಂದ ಪಾರಾಗಿ ಬಂದ ಮಹಿಳೆ ಹಿರೇಮರಳಿಹಳ್ಳಿ ಗ್ರಾಮಸ್ಥರಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪರಶುರಾಮ ಹಟ್ಟಿಯನ್ನು ಪೋಲಿಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಬಸವರಾಜ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ