ಎರಡು ವರ್ಷ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿಗಳಿಂದ ದಾಳಿ!
ಬೆಂಗಳೂರು: ಎರಡು ವರ್ಷ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಪರಿಣಾಮವಾಗಿ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಹೆಚ್ ಎಎಲ್ ಬಳಿಯ ನಾರಾಯಣ ರೆಡ್ಡಿ ಲೇಔಟ್ ನಲ್ಲಿ ನಡೆದಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷ ವಯಸ್ಸಿನ ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ ಮಗುವಿನ ಕುತ್ತಿಗೆ, ತೊಡೆ, ಕಿವಿಯ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಸದ್ಯ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಚಿಕಿತ್ಸೆ ಪಡೆಯುತ್ತಿದೆ.
ಮಗುವಿನ ಪೋಷಕರು ಬಿಬಿಎಂಪಿ ಅಧಿಕಾರಗಳ ವಿರುದ್ಧ ದೂರು ನೀಡಿದ್ದು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೂ, ಯಾವುದೇ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿಲ್ಲ. ಈ ಬಗ್ಗೆ ಯಾವುದೇ ವಿಚಾರಣೆ ಕೂಡ ನಡೆದಿಲ್ಲ ಎಂದು ತಿಳಿದು ಬಂದಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಿದೆ. ಇದರ ಬಗ್ಗೆ ಸರ್ಕಾರವಾಗಲಿ ಸಂಬಂಧ ಪಟ್ಟ ಇಲಾಖೆಗಳಾಗಲಿ ಗಮನ ಹರಿಸುತ್ತಿಲ್ಲ. ಸಾರ್ವಜನಿಕರು ಬೀದಿ ನಾಯಿಗಳಿಂದ ಕಚ್ಚಿಸಿಕೊಂಡು ತಮ್ಮದಲ್ಲದ ತಪ್ಪಿಗೆ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಆಸ್ಪತ್ರೆಗೆ ಇಂಜೆಕ್ಷನ್ ಪಡೆದುಕೊಳ್ಳಲು ಸುತ್ತಾಡುವಂತಾಗಿದೆ. ಬೀದಿ ನಾಯಿಯಿಂದ ಸಾರ್ವಜನಿಕರು ಕಡಿತಕ್ಕೊಳಗಾದರೆ, ಸಂಬಂಧ ಪಟ್ಟ ಇಲಾಖೆ ಅಥವಾ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ದೂರು ನೀಡಿ, ಪರಿಹಾರ ಪಡೆಯಲು ಮುಂದಾಗಬೇಕು. ಆಗ ಮಾತ್ರವೇ ಅಧಿಕಾರಿಗಳು, ಇಲಾಖೆಗಳು ಕೂಡ ಜವಾಬ್ದಾರಿಯಿಂದ ವರ್ತಿಸುತ್ತವೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
ಇನ್ನಷ್ಟು ಸುದ್ದಿಗಳು…
ಬೈಕು, ಟಿವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ ರದ್ದಾಗುವುದೇ? | ಕೊನೆಗೂ ಸ್ಪಷ್ಟನೆ ನೀಡಿದ ಇಲಾಖೆ
ನಿಮ್ಮ ಜೀವ ನಿಮ್ಮ ರಕ್ಷಣೆ ಎಂಬುದನ್ನು ಮರೆಯಬೇಡಿ | ಸಿಎಂ ಬಸವರಾಜ್ ಬೊಮ್ಮಾಯಿ
ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ!
ಹಾಸ್ಟೆಲ್ ನ ರಹಸ್ಯ ಮುಚ್ಚಿ ಹಾಕಲು ಅತ್ಯಾಚಾರದ ಕಥೆ ಕಟ್ಟಿದ ವಿದ್ಯಾರ್ಥಿನಿ?
ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ!
1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯುವ ಚಿಂತನೆ ಸದ್ಯಕ್ಕಿಲ್ಲ | ಸಚಿವ ಸುಧಾಕರ್
ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ