ವೈದ್ಯಕೀಯ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಧರಣಿ - Mahanayaka
3:38 AM Thursday 21 - November 2024

ವೈದ್ಯಕೀಯ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಧರಣಿ

doctore
04/02/2022

ಕಲಬುರಗಿ: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗಳನ್ನು ಮುಂದೂಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನಡೆಯಬೇಕಿತ್ತು. ಆದರೆ, ಕೋವಿಡ್ ಹಿನ್ನೆಲೆ ಅವರಿಗೆ ಕೇವಲ ಏಳು ತಿಂಗಳ ತರಗತಿಗಳು ನಡೆದಿವೆ. ಪಠ್ಯಕ್ರಮವೇ ಪೂರ್ಣಗೊಂಡಿಲ್ಲ. ಅವಶ್ಯಕ ಕ್ಲಿನಿಕಲ್ ಪೋಸ್ಟಿಂಗ್ ನಡೆದಿಲ್ಲ. ಅಲ್ಲದೇ ಈ ವಿದ್ಯಾರ್ಥಿಗಳು ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಓಮೈಕ್ರಾನ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ಇಂಥ ಸಂದರ್ಭದಲ್ಲಿ ಪರೀಕ್ಷೆ ಎದುರಿಸುವುದು ಕಷ್ಟವಾಗಲಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.ಒಂದು ವಾರದ ಹಿಂದೆ ನೂರಾರು ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಹೋರಾಟದಲ್ಲಿ ಭಾಗವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹಾಗೂ ರಾಜೀವ್‌ ಗಾಂಧಿ ಆರೋಗ್ಯ ಮತ್ತು ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಅವರನ್ನೂ ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳು ಓದುವುದನ್ನೂ ಬಿಟ್ಟು ಸೋಂಕಿತರ ಸೇವೆ ಮಾಡಿದ್ದಾರೆ.

ಕಾರಣ ವಿದ್ಯಾರ್ಥಿಗಳಿಗೆ ಅನುಕೂಲಕರ ಸಂದರ್ಭದಲ್ಲಿ ಪರೀಕ್ಷೆ ನಡೆಸಬೇಕು ಎಂದು ಕೋರಲಾಗಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸಚಿವರು ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಸಲಹೆಯನ್ನೂ ನೀಡಿದ್ದರು. ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ವಿಶ್ವವಿದ್ಯಾಲಯದ ಕುಲಪತಿ ಹೇಳಿದ್ದರು. ಆದರೆ, ಇದೇ ಫೆ. 22ರಿಂದ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿರುವುದು ಅತ್ಯಂತ ಖಂಡನೀಯ. ಹೀಗಾಗಿ, ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ ಎಂದರು.




ನೀಟ್’ ಪರೀಕ್ಷೆಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಫೆಬ್ರವರಿಯಲ್ಲಿ ಪರೀಕ್ಷೆ ನಡೆಸಲೇಬೇಕು ಎಂದು ವಿಶ್ವವಿದ್ಯಾಲಯ ಕಾರಣ ನೀಡಿದೆ. ಆದರೆ, ‘ನೀಟ್’ ಪರೀಕ್ಷೆಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಇದಲ್ಲದೇ, ಎನ್‌ಎಂಸಿ ಕೂಡ ಮಾರ್ಚ್‌ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ. ಇತ್ತ ಕೊಂಚ ಭರವಸೆಯಿಂದ ಕಾಯುತ್ತಿದ್ದ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಸಂದಿಗ್ದ ಪರಿಸ್ಥಿತಿಗೆ ದೂಡಿದಂತಾಗಿದೆ. ಅವರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.ಈಗಾಗಲೇ ಬಹುತೇಕ ರಾಜ್ಯಗಳು ಒಂದು ತಿಂಗಳವರೆಗೆ ಪರೀಕ್ಷೆಗಳನ್ನು ಮುಂದೂಡಿವೆ. ಅದೇ ಮಾರ್ಗವನ್ನು ರಾಜ್ಯದಲ್ಲೂ ಅನುಸರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಐಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಸ್.ಎಚ್, ಉಪಾಧ್ಯಕ್ಷೆ ಸ್ನೇಹಾ ಕಟ್ಟಿಮನಿ, ಕಾಯದರ್ಶಿ ತುಳಜರಾಮ ಎನ್.ಕೆ., ಸದಸ್ಯರಾದ ಶಿಲ್ಪಾ ಬಿ.ಕೆ., ಪ್ರೀತಿ ದೊಡ್ಡಮನಿ, ಭೀಮು ಆಂದೋಲ, ನಾಗರಾಜ, ಅಲಿಖಾನ್, ವಿಕಾಶ್, ಅಭಿಲಾಸ್, ಪ್ರಮೋದ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಓಮಸತ್ವ, ಕಸ್ತೂರಿ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ ಯತ್ನ

ಪಿಎಸ್‌ ಐ ನೇಮಕಾತಿಯಲ್ಲಿ ವಂಚನೆ: ಅಭ್ಯರ್ಥಿಗಳಿಂದ ಬೃಹತ್‌ ಪ್ರತಿಭಟನೆ

ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ

ಬಿಎಸ್ ಪಿ ಮಾತ್ರ ದೇಶಕ್ಕೆ ಅಚ್ಛೇದಿನ್ ತರಬಲ್ಲ ಪಕ್ಷ: ಮಾಯಾವತಿ

 

ಇತ್ತೀಚಿನ ಸುದ್ದಿ