ಯೋಗ ವ್ಯಕ್ತಿಗಾಗಿ ಮಾತ್ರವಲ್ಲ, ವಿಶ್ವಶಾಂತಿಗಾಗಿ: ಮೈಸೂರಿನಲ್ಲಿ ಪ್ರಧಾನಿ ಮೋದಿ ಮಾತುಗಳು - Mahanayaka
6:17 PM Wednesday 11 - December 2024

ಯೋಗ ವ್ಯಕ್ತಿಗಾಗಿ ಮಾತ್ರವಲ್ಲ, ವಿಶ್ವಶಾಂತಿಗಾಗಿ: ಮೈಸೂರಿನಲ್ಲಿ ಪ್ರಧಾನಿ ಮೋದಿ ಮಾತುಗಳು

yoga day
21/06/2022

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಮೈದಾನದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳ ಜೊತೆಗೆ ಯೋಗಾಭ್ಯಾಸ ಮಾಡಿದರು.

ಯೋಗಾಭ್ಯಾಸಕ್ಕೂ ಮುನ್ನ ಯೋಗ ಪಟುಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಶುಭ ಕೋರಿದರು

ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು ಅಭ್ಯಾಸ ಮಾಡಲಾಗುತ್ತಿದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಕೇವಲ ನಮಗೆ ಮಾತ್ರವಲ್ಲ ಯೋಗ ನಮ್ಮ ರಾಷ್ಟ್ರ ಸೇರಿದಂತೆ ಇಡೀ ಜಗತ್ತಿಗೆ ಶಾಂತಿಯನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಇಡೀ ವಿಶ್ವವು ನಮ್ಮ ದೇಹ ಮತ್ತು ಆತ್ಮದಿಂದ ಆರಂಭವಾಗುತ್ತದೆ. ವಿಶ್ವವು ನಮ್ಮಿಂದ ಪ್ರಾರಂಭವಾಗುತ್ತದೆ ಮತ್ತು ಯೋಗವು ನಮ್ಮೊಳಗಿನ ಎಲ್ಲವನ್ನೂ ಜಾಗೃತಗೊಳಿಸುತ್ತದೆ ಮತ್ತು ಅರಿವಿನ ಪ್ರಜ್ಞೆಯನ್ನು ನಿರ್ಮಿಸುತ್ತದೆ ಎಂದರು.

ಕೆಲವು ವರ್ಷಗಳ ಹಿಂದೆ ಯೋಗ ಮನೆಯೊಳಗೆ, ಆಧ್ಯಾತ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿತ್ತು. ಈಗ ದೇಶದ ಮೂಲೆ ಮೂಲೆಗಳಲ್ಲಿ ಯೋಗ ನಡೆಯುತ್ತಿದೆ. ಇದು ವ್ಯಕ್ತಿಗಾಗಿ ಯೋಗವಲ್ಲ. ಮನು ಕುಲದ ಒಳಿತಿಗಾಗಿ ಯೋಗ. ಈ ಕಾರಣಕ್ಕೆ ಈ ಬಾರಿ ಮಾನವೀಯತೆಗಾಗಿ ಯೋಗ ಮಾಡುತ್ತಿದ್ದೇವೆ. ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ಯೋಗಕ್ಕೆ ಇದೆ. ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಮಾನಸಿಕ ಶಾಂತಿ, ಸದೃಢತೆಗೆ ಪ್ರತಿಯೊಬ್ಬರು ಯೋಗ ಮಾಡಬೇಕು. ಯೋಗಕ್ಕೆ ಇರುವ ಶಕ್ತಿಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

ಸೂರ್ಯೋದಯ ಸಮಯಕ್ಕೆ ಇಡೀ ವಿಶ್ವದಲ್ಲಿ ಯೋಗ ಮಾಡಲಾಗುತ್ತಿದೆ. ಇಂದು ಯೂನಿವರ್ಸಲ್ ಯೋಗ ಚೈನ್ ಸೃಷ್ಟಿಯಾಗಲಿದೆ. ಒಂದೆರಡು ನಿಮಿಷದ ಧಾನ್ಯ ನಮ್ಮ ಮನಸ್ಸಿಗೆ ಶಕ್ತಿ ತುಂಬುತ್ತದೆ. ನಾವು ಯೋಗವನ್ನು ಬದುಕಿನ ಬಹು ದೊಡ್ಡ ಭಾಗವಾಗಿ ಸ್ವೀಕರಿಸಬೇಕು. ಯೋಗದ ಬಗ್ಗೆ ತಿಳಿದುಕೊಂಡು ಯೋಗದ ಜೊತೆಗೆ ಬದುಕುವುದ ಕಲಿಯಬೇಕು ಎಂದರು.

2014ರ ಸೆಪ್ಟೆಂಬರ್ 27ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಮೊದಲ ಬಾರಿಗೆ ಮುಂದಿಟ್ಟರು. ಭಾರತವು ಅಂಗೀಕರಿಸಿದ ಕರಡು ನಿರ್ಣಯವನ್ನು 177 ರಾಷ್ಟ್ರಗಳು ಬೆಂಬಲಿಸಿದವು. ಯೋಗದ ಸಾರ್ವತ್ರಿಕ ಮನ್ನಣೆ ಮತ್ತು ಹೆಚ್ಚುತ್ತಿರುವ ಜನಪ್ರಿಯತೆಯೊಂದಿಗೆ, ವಿಶ್ವಸಂಸ್ಥೆಯು ಜೂನ್ 21 ಅನ್ನು 2014ರ ಡಿಸೆಂಬರ್ 11 ರಂದು ಅಂತಾರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ಯಾನಿಟೈಸರ್ ಕುಡಿಯುವ ಚಟ: ವ್ಯಾಪಾರಿಗಳಿಗೆ ತಲೆನೋವಾದ ಕೆಎಸ್ ಇಬಿ ನೌಕರ

ಯೋಗ ದಿನಾಚರಣೆ ಹಿನ್ನೆಲೆ ಇಂದು ಶಾಲೆಗಳಿಗೆ ಅರ್ಧ ದಿನ ರಜೆ!

ಶಾಸಕ ರಾಮ್ ದಾಸ್ ಬೆನ್ನಿಗೆ ಗುದ್ದುವಷ್ಟು ಪ್ರೀತಿ ಮೋದಿಜಿಗೆ ಯಾಕೆ?: ರಾಮ್ ದಾಸ್ ಏನು ಹೇಳಿದ್ರು?

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ