ಗ್ಯಾಂಗ್’ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್ ರಿಂದ ವಶಪಡಿಸಿಕೊಂಡ ಭೂಮಿ ಇನ್ಮುಂದೆ ಬಡವರಿಗೆ: ಸಿಎಂ ಯೋಗಿ ಮಾಡಿದ ತೀರ್ಮಾನ ಏನ್ ಗೊತ್ತಾ..?
ಪ್ರಯಾಗ್ ರಾಜ್ ನಲ್ಲಿ ಹತ್ಯೆಗೀಡಾಗಿದ್ದ ಗ್ಯಾಂಗ್ಸ್ಟರ್ ಆಗಿದ್ದ ರಾಜಕಾರಣಿ ಅತೀಕ್ ಅಹ್ಮದ್ ರಿಂದ ವಶಪಡಿಸಿಕೊಂಡಿದ್ದ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್‌ಗಳ ಕೀಲಿಯನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಹಸ್ತಾಂತರಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಫ್ಲ್ಯಾಟನ್ನು ಹಂಚಿಕೆ ಮಾಡಲಾಯಿತು. ಮೊದಲು ಫ್ಲ್ಯಾಟ್ ಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಮೌರ್ಯ ನಂತರ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿದರು.
ಅಧಿಕಾರಿಗಳ ಪ್ರಕಾರ, ಪ್ರತಿ ಫ್ಲ್ಯಾಟ್ 41 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಇದು ಎರಡು ಕೋಣೆ, ಅಡುಗೆಮನೆ ಮತ್ತು ಶೌಚಾಲಯವನ್ನು ಹೊಂದಿದೆ. ಫ್ಲ್ಯಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಈ ವರ್ಷದ ಏಪ್ರಿಲ್ ನಲ್ಲಿ ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ್ದ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಪ್ರಯಾಗ್ ರಾಜ್ ಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವೇಳೆ ಅವರು ಉತ್ತರ ಪ್ರದೇಶ ಪೊಲೀಸರ ವಶದಲ್ಲಿದ್ದರು. ಘಟನೆಯ ಕೆಲವು ದಿನಗಳ ಮೊದಲು, ಅತಿಕ್ನ್ನು ಅಪಹರಣ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆ ವಿಧಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw