‘ಉರ್ದು’ ವಿವಾದ: ಸಮಾಜವಾದಿ ಪಕ್ಷದ ವಿರುದ್ಧ ಯುಪಿ ಸಿಎಂ ಯೋಗಿ ಕಿಡಿ

ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದು, ಸದನದ ಕಲಾಪಗಳನ್ನು ಉರ್ದು ಭಾಷೆಗೂ ಭಾಷಾಂತರಿಸಬೇಕು ಎಂದು ಪಕ್ಷ ಒತ್ತಾಯಿಸಿದೆ. ಸಮಾಜವಾದಿ ಪಕ್ಷವು “ದ್ವಂದ್ವ ನೀತಿ” ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಅವರು ತಮ್ಮ ಸ್ವಂತ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಇತರರ ಮಕ್ಕಳು ಉರ್ದು ಕಲಿತು ಮೌಲ್ವಿಗಳಾಗಬೇಕೆಂದು ಬಯಸುತ್ತಾರೆ ಎಂದು ಹೇಳಿದ್ದಾರೆ.
ಬಜೆಟ್ ಅಧಿವೇಶನದ ಮೊದಲ ದಿನದಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಸದನದ ಕಾರ್ಯಕಲಾಪಗಳು ಈಗ ಭೋಜ್ ಪುರಿ, ಬ್ರಜ್, ಬುಂದೇಲಿ ಮತ್ತು ಇಂಗ್ಲಿಷ್ನಲ್ಲಿ ಲಭ್ಯವಿರುತ್ತವೆ ಎಂದು ಸ್ಪೀಕರ್ ಉಲ್ಲೇಖಿಸಿದ್ದರು.
ಸಮಾಜವಾದಿ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು ಉರ್ದು ಭಾಷಾಂತರವನ್ನೂ ಸೇರಿಸಬೇಕೆಂದು ಒತ್ತಾಯಿಸಿದ್ದರು.
ಸಮಾಜವಾದಿ ಪಕ್ಷದ ನಾಯಕನ ಹೇಳಿಕೆಗೆ ಯೋಗಿ ಆದಿತ್ಯನಾಥ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಉರ್ದು ಭಾಷೆಯನ್ನು ಮಾತ್ರ ಪ್ರತಿಪಾದಿಸಿದ್ದಕ್ಕಾಗಿ ಅಖಿಲೇಶ್ ಯಾದವ್ ಅವರ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj