ಯೋಗಿ ‘ಉಪಯೋಗಿ’ ಎಂದ ಮೋದಿ; ಯೋಗಿ ‘ನಿರುಪಯೋಗಿ’ ಎಂದ ಅಖಿಲೇಶ್ ಯಾದವ್!
ಲಕ್ನೋ: ಯೋಗಿ ‘ಉಪಯೋಗಿ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್, ಯೋಗಿ ‘ನಿರುಪಯೋಗಿ’ ಎಂದು ಎಂದು ತಿರುಗೇಟು ನೀಡಿದ್ದಾರೆ.
ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ದಲಿತರು ಮತ್ತು ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿರುವ ಅಖಿಲೇಶ್ ಯಾದವ್, ‘ಹತ್ರಾಸ್‌ನ ಹೆಣ್ಣು ಮಗಳು, ಲಖಿಂಪುರದ ರೈತರು, ಗೋರಖ್‌ಪುರದ ವ್ಯಾಪಾರಿ, ಅಸುರಕ್ಷಿತ ಭಾವನೆಯಲ್ಲಿರುವ ಮಹಿಳೆಯರು, ನಿರುದ್ಯೋಗಿ ಯುವಕರು, ದಲಿತರು ಮತ್ತು ಹಿಂದುಳಿದ ವರ್ಗದವರು ಈಗಿನ ಸರ್ಕಾರ ನಿರುಪಯುಕ್ತವೆಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಶಹಜಹಾನ್‌ಪುರದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದಲ್ಲಿ ಮಾಫಿಯಾಗಳನ್ನು ತೊಡೆದುಹಾಕಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ,’ ಎಂದಿದ್ದರು. ಅಲ್ಲದೇ, ‘ಯುಪಿ + ಯೋಗಿ’ ತುಂಬಾ ಉಪಯೋಗಿ’ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್ ಯೋಗಿ ನಿರುಪಯೋಗಿ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ!
ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾವು
ಗಂಗಾ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ
ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ
ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ: ಸಿಎಂಗೆ ಸಿದ್ದರಾಮಯ್ಯ ಮನವಿ
ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ