ಯೋಗಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಐಪಿಎಸ್ ಅಧಿಕಾರಿ ಅರೆಸ್ಟ್!
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಮಾಜಿ ಐಪಿಎಸ್ ಅಧಿಕಾರಿಯನ್ನು ಉತ್ತರ ಪ್ರದೇಶ ಪೊಲೀಸರು ಬಲವಂತವಾಗಿ ಬಂಧಿಸಿ ಕರೆದೊಯ್ದ ಘಟನೆ ನಡೆದಿದೆ.
ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಬಂಧನಕ್ಕೊಳಗಾದವರಾಗಿದ್ದು, ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ವೇಳೆ ಅಮಿತಾಬ್, ತನಗೆ ಎಫ್ ಐಆರ್ ಪತ್ರವನ್ನು ತೋರಿಸಿ ಎಂದು ಕೇಳಿದ್ದಾರೆ. ಆದರೆ, ಪೊಲೀಸರು ಬಲವಂತ ಮಾಡಿ ಜೀಪ್ ಹತ್ತಿಸಲು ಪ್ರಯತ್ನಿಸಿದ್ದಾರೆ.
ಎಫ್ ಐ ಆರ್ ಪತ್ರವನ್ನು ತೋರಿಸದೇ ನಾನು ನಿಮ್ಮ ಜೊತೆಗೆ ಬರುವುದಿಲ್ಲ ಎಂದು ಅವರು ಹೇಳಿದರೂ, ಪೊಲೀಸರು ಬಲವಂತವಾಗಿ ಅವರನ್ನು ಜೀಪ್ ಗೆ ತುಂಬಿಸುತ್ತಿರುವ ವಿಡಿಯೋವನ್ನು ಸಮಾಜವಾದಿ ಪಾರ್ಟಿಯ ನಾಯಕ ಅಖಿಲೇಶ್ ಯಾದವ್ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇನ್ನಷ್ಟು ಸುದ್ದಿಗಳು…
ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಐದು ಮಂದಿಯ ಪೈಕಿ ಓರ್ವ ಅಪ್ರಾಪ್ತ ವಯಸ್ಕ
ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳು ಇನ್ನಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ!
ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!
ಅಮಾನವೀಯ ಘಟನೆ: ಪತ್ನಿಯ ಖಾಸಗಿ ಅಂಗಕ್ಕೆ ಸೂಜಿದಾರದಿಂದ ಹೊಲಿಗೆ ಹಾಕಿದ ಪತಿ
ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ | ನಟಿ ರಮ್ಯಾ ಪ್ರಶ್ನೆ