ಯೋಗ್ಯತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಎಂಬಿಎ ಪದವೀಧರೆ ಆತ್ಮಹತ್ಯೆ
ಉಡುಪಿ:ಯೋಗ್ಯತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ.
ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದವರು.ಸಹನಾ ಅಕ್ಕನ ಮನೆಯಾದ ಕಾಪುವಿನ ಕಟ್ಟಿಂಗೇರಿಯಗೆ ಬಂದಿದ್ದು ಅಕ್ಕನ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದಳು. ತಕ್ಷಣ ಸಹನಾಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಪದವಿ ಮುಗಿಸಿದ್ದ ಯುವತಿ ನಂತರ ಉದ್ಯೋಗಕ್ಕಾಗಿ ಅಲೆದಾಡಿದ್ದಳು. ಆದರೆ, ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಉದ್ಯೋಗ ದೊರಕದೆ ಇರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನೋವಲ್ಲಿ ಧೈರ್ಯ ತುಂಬುವ, ಕಷ್ಟದಲ್ಲಿ ನೆರವಾಗುವ ದಾದಿಯರಿಗೆ ನಮನ
ಹಾಲುಣಿಸುವ ತಾಯಂದಿರಿಗಾಗಿ ರೈಲ್ವೆಯಿಂದ “ಬೇಬಿ ಬರ್ತ್”
ಈ 3 ವಿಷಯ ಸರ್ಚ್ ಮಾಡಿದರೆ ನೀವು ಜೈಲು ಸೇರುವುದು ಗ್ಯಾರಂಟಿ!
ಧ್ವನಿವರ್ಧಕ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ: ಎಷ್ಟು ಗಂಟೆವರೆಗೆ ಧ್ವನಿವರ್ಧಕ ಬಳಸಬಹುದು?
ವಿದ್ಯುತ್ ಸ್ಪರ್ಶದಿಂದ ಜೂ.ರವಿಚಂದ್ರನ್ ಸಾವು