ನೀನು ಬಚ್ಚಾ.. ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ: ವಿಜಯೇಂದ್ರ ವಿರುದ್ಧ ರಮೇಶ್ ಜಾರಕಿಹೊಳಿ ಗುಡುಗು

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ಗುಡುಗಿದ್ದು, ವಿಜಯೇಂದ್ರ ನೀನು ಬಚ್ಚಾ.. ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜಗಳ ಇದೆ. ಅದು ಅಧ್ಯಕ್ಷ ಸ್ಥಾನ ಬದಲಾವಣೆಯಿಂದ ಮಾತ್ರ ಬದಲಿಸಲು ಸಾಧ್ಯ, ಅಧ್ಯಕ್ಷ ಸ್ಥಾನ ಬದಲಾವಣೆ ಆಗದಿದ್ದರೂ, ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು.
ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎನ್ನುವ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ನಮ್ಮ ನಾಯಕರು, ನಾನು ಅವರ ಬಗ್ಗೆ ಅಗೌರವದಿಂದ ಮಾತನಾಡುವುದಿಲ್ಲ. ನೀನು ಸುಳ್ಳು ಹೇಳುವುದು ಬಿಡು, ನಾನು ಶಿಕಾರಿಪುರಕ್ಕೆ ಬರುತ್ತೇನೆ, ನಿನ್ನ ಮನೆಯ ಮುಂದೆಯಿಂದಲೇ ಪ್ರವಾಸ ಶುರು ಮಾಡುತ್ತೇನೆ, ತಡಿ ನೋಡೋಣ ಎಂದು ಸವಾಲು ಹಾಕಿದರು.
ನಿನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ಮಾಡುವ ಶಕ್ತಿ ನನಗಿದೆ. ನಿನ್ನಂತಹ ಕೀಳುಮಟ್ಟದ ರಾಜಕೀಯ ಮಾಡಲು ನನಗೆ ಬರಲ್ಲ, ವಿಜಯೇಂದ್ರ ಬಗ್ಗೆ ಗೌರವವಿಲ್ಲ, ಅಧ್ಯಕ್ಷ ಸ್ಥಾನದ ಮೇಲೆ ಮಾತ್ರ ಗೌರವವಿದೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: