ಗೋರಕ್ಷಣೆಗೆ ಅವತರಿಸಿದ ಶ್ರೀನಿವಾಸಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ: ಪೇಜಾವರ ಶ್ರೀ ಆಕ್ರೋಶ
ಉಡುಪಿ: ತಿರುಮಲ ಲಡ್ಡು ಪ್ರಸಾದದಲ್ಲಿ ಗೋವಿನ ಕೊಬ್ಬು ಕಲಬೆರಕೆ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥಶ್ರೀ ಪ್ರತಿಕ್ರಿಯಿಸಿದ್ದಾರೆ.
ತಿರುಪತಿಯ ಶ್ರೀನಿವಾಸ ದೇವರು ಗೋರಕ್ಷಣೆಗೆ ಅವತರಿಸಿದವರು. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಮಿಶ್ರಣದಿಂದ ಲಡ್ಡು ಪ್ರಸಾದ ತಯಾರಿಸಿದ್ದಾರೆ. ಇದು ಸನಾತನ ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ ಎಂದು ಅವರು ಹೇಳಿದರು.
ಆಂಧ್ರದ ಹಿಂದಿನ ಸರ್ಕಾರ ಈ ಕೃತ್ಯ ನಡೆಸಿರುವುದು ಖಂಡನಾರ್ಹ. ಇದು ದೇವರಿಗೆ ಬಗೆದಿರುವ ಅಪಚಾರ ಎಂದು ವಾಗ್ದಾಳಿ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: