ತಲೆಗೆ ಗುಂಡು ಹೊಡೆದುಕೊಂಡು ಯುವಕ ಸಾವಿಗೆ ಶರಣು!
ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ.
ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿದೆ.
ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದರೆನ್ನಲಾಗಿದ್ದು, ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw