ಭಾರತೀಯ ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಸಾವಿಗೆ ಶರಣು

ಚಿಕ್ಕಮಗಳೂರು: ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವಕನೋರ್ವ ಸಾವಿಗೆ ಶರಣಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ (23) ಸಾವಿಗೆ ಶರಣಾಗಿರುವ ಯುವಕನಾಗಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಕಾರ್ತಿಕ್, ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ, ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಬರೆದುಕೊಂಡಿದ್ದಾನೆ.
ಸೇನೆಗೆ ಸೇರಬೇಕೆಂದು 2 ವರ್ಷದಿಂದ ಕಾರ್ತಿಕ್ ನಿರಂತರ ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ. ಸೇನಾ ನೇಮಕಾತಿ ಪರೀಕ್ಷೆಯ ರಿಸಲ್ಟ್ ನಲ್ಲಿ ಫೇಲ್ ಆಗಿದ್ದು, ಇದರ ಬೆನ್ನಲ್ಲೇ ಸಾವಿಗೆ ಶರಣಾಗಿದ್ದಾನೆ.
ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth