ಅಪ್ರಾಪ್ತೆಗೆ ಕಿರುಕುಳ ಆರೋಪ: ಯುವಕನಿಗೆ ಮಾರಣಾಂತಿಕ ಹಲ್ಲೆ

ಸುಬ್ರಹ್ಮಣ್ಯ: ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಹಫೀದ್, ಥಳಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಅಫೀದ್ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಅಫೀದ್ ರನ್ನು ತಂಡವೊಂದು ಬಲವಂತವಾಗಿ ಕರೆದೊಯ್ದು, ಅರೆಬೆತ್ತಲೆಗೊಳಿಸಿ ತೀವ್ರವಾಗಿ ಥಳಿಸಿದೆ.
ಹಲ್ಲೆಗೊಳಗಾದ ಯುವಕನ ಬೆನ್ನಲ್ಲಿ ರಕ್ತ ಹೆಪ್ಪುಗಟ್ಟಿದೆ. ಹಫೀದ್ ನೀಡಿರುವ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw