ಟಿಪ್ಪರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ: ಕೊಕ್ಕಡದಲ್ಲಿ ಟಿಪ್ಪರ್ ಡಿಕ್ಕಿಹೊಡೆದು ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೊಕ್ಕಡ ನಿವಾಸಿಯಾಗಿರುವ ಸಿರಾಜ್ ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಕೊಕ್ಕಡದಲ್ಲಿ ಇವರು ಚಲಾಯಿಸುತ್ತಿದ್ದ ಬೈಕಿಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw