ರೋಸ್ ಸಮಾರಂಭದಲ್ಲಿ ಕುಸಿದುಬಿದ್ದು ಯುವತಿ ಸಾವು
ಉಡುಪಿ: ರೋಸ್ ಸಮಾರಂಭದಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಮೃತ ಯುವತಿಯನ್ನು ಹಾವಂಜೆ ನಿವಾಸಿ 23ವರ್ಷದ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8:30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.
ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka