ಬೆಂಗಳೂರು: ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ
25/04/2024
ಬೆಂಗಳೂರು: ಬೆಂಗಳೂರಿನಲ್ಲಿ 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಘಟನೆ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ.
ಐವರು ಕಾಮುಕರು ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth