ಬೆಂಗಳೂರಿನಲ್ಲಿ ಯುವತಿಗೆ ಕಿರುಕುಳ: ಕೇರಳದಲ್ಲಿ ಆರೋಪಿಯ ಬಂಧನ - Mahanayaka

ಬೆಂಗಳೂರಿನಲ್ಲಿ ಯುವತಿಗೆ ಕಿರುಕುಳ: ಕೇರಳದಲ್ಲಿ ಆರೋಪಿಯ ಬಂಧನ

Santosh Daniel
14/04/2025

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಕೇರಳದ ಕೋಝಿಕ್ಕೋರ್ ಬಳಿಯ ಗ್ರಾಮವೊಂದರಿಂದ ಬಂಧಿಸಿದ್ದಾರೆ.


Provided by

ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ ಪೊಲೀಸರಿಗೆ ಸವಾಲಿನ ಕೆಲಸವಾಗಿತ್ತು. ಆರೋಪಿಯ ಚಲನವಲನಗಳನ್ನು ಸುಮಾರು 1,800ಕ್ಕೂ ಹೆಚ್ಚು ಸಿಸಿ ಟಿವಿಗಳಲ್ಲಿ ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.

ಸಂತೋಷ್ ಡೆನಿಯಲ್ ಬಂಧಿತ ಆರೋಪಿಯಾಗಿದ್ದಾನೆ. ಏಪ್ರಿಲ್ 3ರಂದು ಮುಂಜಾನೆ ಆರೋಪಿಯು ಯುವತಿ ಮೇಲೆರಗಿದ್ದ. ಸ್ನೇಹಿತೆ ಜತೆ ಯುವತಿ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದು ಕಿರುಕುಳ ನೀಡಿ ಪರಾರಿಯಾಗಿದ್ದ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by <
Provided by
Provided by
Provided by
Provided by

ಸಂತ್ರಸ್ತೆಗೂ ಆರೋಪಿಗೂ ಯಾವುದೇ ಪರಿಚಯ ಇರಲಿಲ್ಲ. ಘಟನೆ ಬಳಿಕ ಬೆಂಗಳೂರು ನಗರ ತೊರೆದಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಈ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ದೂರು ನೀಡಿದ್ದರು.

ಆರೋಪಿಯು ಕಾರ್ ಶೋರೂಂನಲ್ಲಿ ಟೆಸ್ಟ್ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಯುವತಿಗೆ ಕಿರುಕುಳ ನೀಡಿದ ಬಳಿಕ ತಮಿಳುನಾಡು, ಕೇರಳದಲ್ಲಿ ತಪ್ಪಿಸಿಕೊಂಡು ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಬಂದಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕುಡಿತದ ಮತ್ತಿನಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ತಿಳೀದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ