ಕಚೇರಿ ಕೆಲಸಕ್ಕೆ ತೆರಳಿದ್ದ ಯುವತಿ ಮರಳಿ ಬಾರದೇ ನಾಪತ್ತೆ - Mahanayaka

ಕಚೇರಿ ಕೆಲಸಕ್ಕೆ ತೆರಳಿದ್ದ ಯುವತಿ ಮರಳಿ ಬಾರದೇ ನಾಪತ್ತೆ

mouna
04/03/2023

ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ(28) ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ.

5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ನಾಪತ್ತೆಯಾದ ಸಂದರ್ಭದಲ್ಲಿ ಕೆಂಪು ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿಉಡುಪಿ ನಗರ ಪೊಲೀಸ್‌ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ