ಕುಂದಾಪುರಕ್ಕೆ ಹೋಗಿ ಬರುವುದಾಗಿ ತೆರಳಿದ್ದ ಯುವತಿ ನಾಪತ್ತೆ!
ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕುಳ್ಳಗಿನ ಶರೀರ,ಬಿಳಿ ಮೈ ಬಣ್ಣ,ಮುಖದ ಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು,ಬಲಕೈ ಮೇಲೆ ಚಿಕ್ಕ ಕಪ್ಪು ಮಚ್ಚೆ ಹೊಂದಿದ್ದು,ನೀಲಿ ಬಣ್ಣದ ಚೂಡಿದಾರ ಟಾಪ್.ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು.ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw