ಭದ್ರಾ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲು: ಶವಕ್ಕಾಗಿ ಮುಂದುವರಿದ ಶೋಧ

ಚಿಕ್ಕಮಗಳೂರು: ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಊಟಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: