ರೈಲಿನಡಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು
25/04/2024
ಬೆಂಗಳೂರು: ಮೂವರು ಯುವಕರು ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ನಡೆದಿದೆ.
ಮೃತರು ಆಂಧ್ರಪ್ರದೇಶದ ಚಿತ್ತೂರು ಮೂಲದವರು ಎಂದು ಹೇಳಲಾಗಿದ್ದು, ಇವರು 25 ರ ವಯಸ್ಸಿನ ಯುವಕರಾಗಿದ್ದಾರೆ. ಮೃತರನ್ನು ಶಶಿಕುಮಾರ್(23) ಲೋಕೇಶ್ (25) ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ.
ಮೃತದೇಹವನ್ನು ಸಾರ್ವಜನಿಕರು ನೋಡಿದ ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth