ರಕ್ಷಿತ್ ಶಿವರಾಂ ಅಭಿಮಾನಿಗಳಿಂದ “ಯುವ ಕಾಂಗ್ರೆಸ್ ಬೆಳ್ತಂಗಡಿ 0.2” ಗ್ರೂಪ್  ಆರಂಭ: ತಾಲೂಕಿನಾದ್ಯಂತ ಅಭಿಯಾನ!

belthangady
20/07/2023

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ಪರವಾಗಿ ಬೆಳ್ತಂಗಡಿಯಲ್ಲಿ ವಾಟ್ಸಾಪ್ ಗ್ರೂಪ್ ಗಳು ಮತ್ತಷ್ಟು ಸಕ್ರಿಯವಾಗಿದ್ದು, ಇದೀಗ “ಯುವ ಕಾಂಗ್ರೆಸ್ ಬೆಳ್ತಂಗಡಿ 0.2” ಎಂಬ ಹೆಸರಿನ ವಾಟ್ಸಾಪ್ ಗ್ರೂಪ್ ಸಂಚಲನ ಮೂಡಿಸಿದೆ.

ಬೆಳ್ತಂಗಡಿಯಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸಲು ರಕ್ಷಿತ್ ಶಿವರಾಂ ಅಭಿಮಾನಿಗಳು ಹಾಗೂ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕ ಗ್ರೂಪ್ ಆರಂಭಿಸಿದ್ದು, ಕೆಲವೇ ದಿನಗಳಲ್ಲಿ ಗ್ರೂಪ್ ಗೆ ಸಾವಿರಕ್ಕೂ ಹೆಚ್ಚು ಜನರನ್ನು ಸೇರ್ಪಡೆಗೊಳಿಸಿ ಪಕ್ಷವನ್ನು ಸಂಘಟಿಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನಾದ್ಯಂತ ಗ್ರೂಪ್ ಗಳನ್ನು ಕ್ರಿಯೇಟ್ ಮಾಡುವ ಮೂಲಕ ರಕ್ಷಿತ್ ಶಿವರಾಮ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ, ಇದೊಂದು ಸಕಾರಾತ್ಮ  ಪ್ರತಿಕ್ರಿಯೆಯಾಗಿದೆ  ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

ಬೆಳ್ತಂಗಡಿ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ರಕ್ಷಿತ್ ಶಿವರಾಂ ಅವರಿಗೆ ಸೋಲಾಗಿದ್ದರೂ, ಬಿಜೆಪಿ ಅಭ್ಯರ್ಥಿ ಎದುರು ರಕ್ಷಿತ್ ಅತೀ ಹೆಚ್ಚು ಮತಗಳನ್ನು ಪಡೆದುಕೊಂಡು ಪ್ರಬಲ ಸ್ಪರ್ಧೆ ನೀಡಿ ಗಮನ ಸೆಳೆದಿದ್ದರು. ರಕ್ಷಿತ್ ಶಿವರಾಂ ಅವರ ಸೋಲಿಗೆ ಕಾರಣ ಏನು ಎಂಬ ಬಗ್ಗೆ ಆತ್ಮವಿಮರ್ಶೆ ಮಾಡಿಕೊಂಡಿರುವ ಕಾರ್ಯಕರ್ತರು, ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಇದೀಗ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version