ಯುವಕ ಆತ್ಮಹತ್ಯೆ ಮಾಡಿಕೊಂಡದ್ದಕ್ಕೆ 10 ಪೊಲೀಸರ ಅಮಾನತು!
ಬಾಗಪತ್: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯಲ್ಲಿ ನಡೆದಿದ್ದು, ಯುವಕ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ.
ಬಾಗಪತ್ ಜಿಲ್ಲೆಯ ಕೊವಿಡ್ ಲಸಿಕಾ ಕೇಂದ್ರದಲ್ಲಿ ಯುವಕ ಮತ್ತು ಪೊಲೀಸರ ನಡುವೆ ಜಗಳ ನಡೆದಿತ್ತು ಎಂದು ಹೇಳಲಾಗಿದೆ. ಘಟನೆ ನಡೆದ ದಿನವೇ ಸಂಜೆ ಯುವಕನ ಮೃತದೇಹ, ಆತನ ತಮ್ಮನ ಮನೆಯ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಲಸಿಕಾ ಕೇಂದ್ರದಲ್ಲಿ ಯುವಕನೊಂದಿಗೆ ಜಗಳವಾಡಿ, ಆತನಿಗೆ ಹೀನಾಮಾನವಾಗಿ ಬೈದಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನುವುದು ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ 10 ಮಂದಿ ಪೊಲೀಸರನ್ನು ಅಮಾನತು ಮಾಡಿ ಪೊಲೀಸ್ ಇಲಾಖೆ ಆದೇಶ ನೀಡಿತ್ತು.
ಈ 10 ಮಂದಿ ಪೊಲೀಸರು ಯುವಕನ ಆತ್ಮಹತ್ಯೆಗೆ ಪ್ರಚೋದನೆ ನೀಡದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದರು. ಜೊತೆಗೆ ಯುವಕನ ಆತ್ಮಹತ್ಯೆಗೆ ಪೊಲೀಸರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿ ದೂರು ಕೂಡ ನೀಡಿದ್ದು, ಈ ಹಿನ್ನೆಲೆಯಲ್ಲಿ 10 ಪೊಲೀಸರನ್ನು ಅಮಾನತು ಮಾಡಲಾಗಿದೆ.
ಇನ್ನಷ್ಟು ಸುದ್ದಿಗಳು…
ಅಡುಗೆ ಮಾಡುವ ವಿಚಾರದಲ್ಲಿ ಪತಿಯೊಂದಿಗೆ ಜಗಳ: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ನಾಳೆಯಿಂದ ಹೊಸ ಬದಲಾವಣೆ
ಮಗುಚಿ ಬಿದ್ದ ಆಟೋ ರಿಕ್ಷಾ: ವೃದ್ಧ ಸ್ಥಳದಲ್ಲಿಯೇ ಸಾವು, ಇಬ್ಬರ ಸ್ಥಿತಿ ಗಂಭೀರ
ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಅಣ್ಣ-ತಂಗಿ!
ಪ್ರವಾಹದ ಬೆನ್ನಲ್ಲೇ ಮನೆಯ ತಾರಸಿ, ರಸ್ತೆಯಲ್ಲಿ ಪತ್ತೆಯಾಗ್ತಿವೆ ಮೊಸಳೆಗಳು!