ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ | ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರ ಅರೆಸ್ಟ್
13/02/2021
ಮಂಗಳೂರು: ನಗರದ ಲಾಲ್ ಭಾಗ್ ಬಳಿಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಫೆ.7ರಂದು ರಾತ್ರಿ ಸುಮಾರು 9:20ರ ವೇಳೆಗೆ ದೀಪಕ್ ಕುಮಾರ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ದೀಪಕ್ ನ ಎಡಗೈ ಹಾಗೂ ಮುಂಗೈಗೆ ಮಾರಕಾಸ್ತ್ರಗಳಿಂದ ಇರಿದು ಹತ್ಯೆಗೆ ಯತ್ನಿಸಿದ್ದರು. ಈ ಸಂಬಂಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಉರ್ವಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಘಟನೆ ಸಂಬಂಧ 18 ವರ್ಷದ ಮೊಹಮ್ಮದ್ ಫಾಯಿಕ್, 19 ವರ್ಷದ ಮೊಹಮ್ಮದ್ ಶಾಹಿಲ್ ಹಾಗೂ ಇನ್ನೋರ್ವ ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.