ಸ್ಕೂಟರ್ ನಲ್ಲಿ ಹೋಗುತ್ತಿದ್ದ ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ: ಐವರು ದುಷ್ಕರ್ಮಿಗಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ : ಮನೆಯಿಂದ ಪೇಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಕಿಡ್ನಾಪ್ ಮಾಡಿಕೊಂಡು ಅಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ್ದ ಘಟನೆ ಭಾನುವಾರ ಅಪರಾಹ್ನ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್(23) ಎಂಬಾತನನ್ನು ಬೊಲೆರೋ ವಾಹನಲ್ಲಿ ಬಂದ ಸುಮಾರು ಏಂಟು ಮಂದಿ ದುಷ್ಪರ್ಮಿಗಳು ಬಲತ್ಕಾರದಿಂದ ಎಳೆದೊಯ್ದಿದ್ದು, ಸವಣಾಲು ರಸ್ತೆ ಮೂಲಕ ಅಳದಂಗಡಿಯ ಕೆದ್ದು ಶಾಲೆಯ ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ವೇಳೆ ಆತನಲ್ಲಿದ್ದ ಮೊಬೈಲ್ ಫೋನ್ ಮತ್ತು ಚಿನ್ನದ ಸರ ಕಸಿದ್ದಿದ್ದಾರೆ. ಘಟನೆ ನಂತರ ಮಾಹಿತಿ ತಿಳಿದ ನಿಶೇತ್ ಯುವಕನ ಕಡೆಯವರು ಕೆದ್ದುವಿಗೆ ಹೋಗಿದ್ದು, ಎರಡು ತಂಡದ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಯುವತಿಗೆ ಮೆಸೇಜ್ ಮಾಡಿದ್ದಾನೆ ಎಂಬ ವಿಚಾರಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಇನ್ನೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆ ಬಗ್ಗೆ ವೇಣೂರು ಠಾಣೆಗೆ ಮಾಹಿತಿ ನೀಡಿದ್ದು ವೇಣೂರು ಪೊಲೀಸರು ಸ್ಥಳಕ್ಕೆ ಬಂದು ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ ಐದು ಜನ ಆರೋಪಿಗಳನ್ನು ಊರವರ ಸಹಾಯದಿಂದ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ವಶಕ್ಕೆ ಪಡೆದಿರುವವರನ್ನು ಹೆಚ್ಚಿನ ತನಿಖೆಗೆ ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಹಲ್ಲೆಗೊಳಗಾದ ನಿಶೇತ್ ಗೆ ಮುಖ ಹಾಗೂ ಇನ್ನಿತರ ಭಾಗಕ್ಕೆ ಗಾಯವಾಗಿದ್ದು , ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka