ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣ: ಗುಂಡು ಹಾರಿಸಿ ಪ್ರಮುಖ ಆರೋಪಿಯ ಬಂಧನ!

ಶಿವಮೊಗ್ಗ: ಯುವಕನಿಗೆ ಚಾಕು ಇರಿದ ಘಟನೆಯ ಬಳಿಕ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ನಡೆದಿದೆ.
ಮಾರ್ನಾಮಿಬೈಲ್ ನಿವಾಸಿ ಜಬೀವುಲ್ಲಾ ಎಂಬಾತ ಬಂಧಿತ ಆರೋಪಿಯಾಗಿದ್ದು, ತಡ ರಾತ್ರಿ ಈತನನ್ನು ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಗಾಂಧಿ ಬಜಾರ್ ನಲ್ಲಿ ಆರೋಪಿಗಳು ಪ್ರೇಮ್ ಸಿಂಗ್ ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಪೊಲೀಸರು ಜೆ.ಸಿ.ನಗರದ ನದೀಮ್(25) ಹಾಗೂ ಬುದ್ಧನಗರದ ಅಬ್ದಲ್ ರೆಹ್ಮಾನ್ (25) ಎಂಬವರನ್ನು ಬಂಧಿಸಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯನ್ನು ತೀರ್ಥ ಹಳ್ಳಿ ರಸ್ತೆಯ ನಮೋಶಂಕರ ಲೇಔಟ್ ನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ವಿನೋಬನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಕುರಿ ಅವರು, ಸಬೀವುಲ್ಲಾನ ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka