ಪೆಟ್ರೋಲ್ ಬಂಕ್ ನಲ್ಲಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ
01/07/2021
ಚಾಮರಾಜನಗರ: ಪೆಟ್ರೋಲ್ ಹಾಕಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸುದಂತೆ ಬೈಕ್ ಸವಾರರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮೂರು ಮಂದಿಯಿದ್ದ ತಂಡ ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಧಾನ್ಯಲಕ್ಷ್ಮೀ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಮೂರು ದಿನಗಳ ಹಿಂದೆ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಯುವಕನಿಗೆ ಥಳಿಸಿದ್ದಲ್ಲದೇ ಆತನ ಬೈಕ್ ನ್ನು ನೆಲಕ್ಕೆ ದೂಡಿಹಾಕಿ ಜಖಂಗೊಳಿಸಿದ್ದು, ಆತನ ಮೊಬೈಲ್ ನ್ನು ಒಡೆದು ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ಸಂಜು, ವೇಣು ಹಾಗೂ ಸ್ನೇಹಿತರು ಈ ಪುಂಡಾಟ ನಡೆಸಿದವರು ಎಂದು ಹೇಳಲಾಗಿದೆ. ಗಾಯಗೊಂಡ ಯುವಕನನ್ನು ಖಲೀಂ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಸಂತ್ರಸ್ತ ಯುವಕ ಪೊಲೀಸರಿಗೆ ದೂರು ನೀಡಿದ್ದು, ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾನೆ.