ಪ್ಲೈಓವರ್ ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು - Mahanayaka
9:23 AM Thursday 12 - December 2024

ಪ್ಲೈಓವರ್ ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು

bengalore
13/11/2021

ಬೆಂಗಳೂರು: ಐದು ಮಂದಿ ಸ್ನೇಹಿತರು ಪ್ಲೈಓವರ್ ಮೇಲೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇಲ್ಲಿನ ವೈಟ್ ಫೀಲ್ಡ್ ನಿವಾಸಿಗಳಾದ 25 ವರ್ಷ ವಯಸ್ಸಿನ ದಿನೇಶ್ ಹಾಗೂ ವಿನಯ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು,  ಅಂಕಿತ್,  ಜನಾರ್ದನ್, ಜಾಸ್ಮಿನ್ ಎಂಬ ಮೂವರಿಗೆ ಗಾಯವಾಗಿದೆ. ಈ ಪೈಕಿ ಅಂಕಿತ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ತಡ ರಾತ್ರಿ ಐವರ ಸ್ನೇಹಿತರು ತಾವರೆಕರೆಯ ಬಳಿಯ ಫ್ಲೈಓವರ್ ಬಳಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಇದೇ ವೇಳೆ ವೇಗವಾಗಿ ಬಂದ ಹಾಲಿನ ವಾಹನವೊಂದು  ಚಾಲಕನ ನಿಯಂತ್ರಣ ತಪ್ಪಿ ಯುವಕರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಚಾಲಕ ವಾಹನ ತೊರೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಬೀದಿ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರ, ಭೀಕರ ಕೊಲೆ

ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!

ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ

ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಇನ್ಸ್ ಪೆಕ್ಟರ್  ರಾಜೇಶ್ವರಿಗೆ ಸಿಎಂ ಸ್ಟಾಲಿನ್ ಅಭಿನಂದನೆ

KSRTC ಬಸ್ ನಲ್ಲಿ ಜೋರಾಗಿ ಹಾಡು ಹಾಕಿದರೆ ಶಿಸ್ತು ಕ್ರಮ: ಶಿಕ್ಷೆ ಏನು ಗೊತ್ತಾ?

ತಾಯಿ ಮೃತಪಟ್ಟರೂ ಗರ್ಭದಲ್ಲಿದ್ದ ಮಗುವನ್ನು ರಕ್ಷಿಸಿದ ವೈದ್ಯರು! | ಅಪರೂಪದ ಘಟನೆ

ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಇನ್ಸ್ ಪೆಕ್ಟರ್  ರಾಜೇಶ್ವರಿಗೆ ಸಿಎಂ ಸ್ಟಾಲಿನ್ ಅಭಿನಂದನೆ

ಇತ್ತೀಚಿನ ಸುದ್ದಿ