ಯುವತಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನ: ನಾಲ್ವರು ಆರೋಪಿಗಳ ಬಂಧನ - Mahanayaka

ಯುವತಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನ: ನಾಲ್ವರು ಆರೋಪಿಗಳ ಬಂಧನ

messege
05/02/2022

ಬೆಂಗಳೂರು: ಯುವತಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮೋಹನ್(21), ರಾಕೇಶ್(20), ವರುಣ್ ಕುಮಾರ್ (21), ಸೂರಜ್ (20) ಬಂಧಿತ ಆರೋಪಿಗಳು. ಅಮೇಜಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಂದ್ರ ಎಂಬಾತ ಯುವತಿಯೋರ್ವಳಿಗೆ ಮೆಸೇಜ್​ ಮಾಡುತ್ತಿದ್ದ. ತಾವು ಕೆಲಸ ಮಾಡುತ್ತಿದ್ದ ಕಚೇರಿಯ ಯುವತಿಗೆ ಮೆಸೇಜ್​ ಮಾಡಿದ್ದರಿಂದ ಸಿಟ್ಟಾದ ಆರೋಪಿಗಳು, ಚಾಕುವಿನಿಂದ ಇರಿದು ಯುವಕನ ಕೊಲೆಗೆ ಯತ್ನಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲೂರು ಠಾಣಾ ಪೊಲೀಸರು, ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಚಾಕು ಮತ್ತು ಎರಡು ಬೈಕ್​ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ

ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿ: ಸಿ.ಟಿ.ರವಿ ವ್ಯಂಗ್ಯ

ವಿಶೇಷಚೇತನ ಪುತ್ರನನ್ನು ಕೊಂದು ದಂಪತಿ ಆತ್ಮಹತ್ಯೆ

ಹಿಜಾಬ್​ ವಿವಾದ: ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ: ರಾಹುಲ್​ ಗಾಂಧಿ

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ

 

ಇತ್ತೀಚಿನ ಸುದ್ದಿ