ಯುವತಿಯ ಅಪಹರಣ: ಲೈಂಗಿಕ ದೌರ್ಜನ್ಯವೆಸಗಿ ಬೀದಿಯಲ್ಲಿ ಮೆರವಣಿಗೆ - Mahanayaka

ಯುವತಿಯ ಅಪಹರಣ: ಲೈಂಗಿಕ ದೌರ್ಜನ್ಯವೆಸಗಿ ಬೀದಿಯಲ್ಲಿ ಮೆರವಣಿಗೆ

rape
28/01/2022

ನವದೆಹಲಿ: ಯುವತಿಯೊಬ್ಬಳನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ತಲೆಗೂದಲು ಕತ್ತರಿಸಿ, ಮುಖ ಕಪ್ಪು ಮಸಿ ಬಳಿದು, ಕುತ್ತಿಗೆಗೆ ಶೂ ಹಾರ ಹಾಕಿ ಪೂರ್ವ ದೆಹಲಿಯ ಕಸ್ತೂರ್ಬಾ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಹೀನಾಯ ಘಟನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. 20 ವರ್ಷದ ಯುವತಿ ಆನಂದ್ ವಿಹಾರ್‌ನಲ್ಲಿರುವ ತನ್ನ ಗಂಡನ ಮನೆಯಲ್ಲಿದ್ದ ಸಂದರ್ಭದಲ್ಲಿ ಕಸ್ತೂರ್ಬಾ ನಗರದಲ್ಲಿನ ಆಕೆಯ ತಾಯಿಯ ಬಳಿ ವಾಸಿಸುತ್ತಿದ್ದ ಆರೋಪಿಗಳು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆಗೆ ಕಾರಣ ಎಂದು ವಿವರಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಆರೋಪಿಯ ಕುಟುಂಬಕ್ಕೆ ಸೇರಿದ ಹುಡುಗ ಮತ್ತು ಸಂತ್ರಸ್ತೆ ಸ್ನೇಹಿತರಾಗಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಕುಟುಂಬದವರು ಈಗ ಸಂತ್ರಸ್ತೆಯನ್ನು ದೂಷಿಸುತ್ತಿದ್ದಾರೆ. ಆಕೆಯ ಕಾರಣದಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಇದೆ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಆಕೆಯನ್ನು ಅಪಹರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಒಂದೇ ಕುಟುಂಬದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ. ಸಂತ್ರಸ್ತೆಗೆ ಕೌನ್ಸೆಲಿಂಗ್ ಮತ್ತು ವೈದ್ಯಕೀಯ ನೆರವು ನೀಡಲಾಗಿದೆ ಎಂದು ಡಿಸಿಪಿ ಆರ್. ಸತ್ಯಸುಂದರಂ ಮಾಹಿತಿ ನೀಡಿದ್ದಾರೆ.ಮಹಿಳೆ ಮೇಲಿನ ಈ ದೌರ್ಜನ್ಯವನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.




ಡಿಸಿಡಬ್ಲ್ಯೂ ಅಧ್ಯಕ್ಷೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿ, 20 ರ ಹರೆಯದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆಕೆಯ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ನಾನು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡುತ್ತಿದ್ದೇನೆ. ಮಹಿಳೆಯರು ಸೇರಿದಂತೆ ಎಲ್ಲಾ ಅಪರಾಧಿಗಳನ್ನು ಬಂಧಿಸಬೇಕು. ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಸಕ ಎಂ.ಪಿ. ಕುಮಾರಸ್ವಾಮಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

ಡಾ.ಬಿ.ಆರ್‌.ಅಂಬೇಡ್ಕರ್‌ ಗೆ ಅವಮಾನ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಸಂವಿಧಾನದ ಪೀಠಿಕೆಯ ಅವಹೇಳನ | ಝೋಮೇಟೋದಿಂದ ಸಂವಿಧಾನದ ಪುಟ ವಿನ್ಯಾಸದ ದುರ್ಬಳಕೆ 

ಸಾಲ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣು

 

ಇತ್ತೀಚಿನ ಸುದ್ದಿ