ಯುವತಿಯ ಜೊತೆಗಿನ ಆಡಿಯೋ ವೈರಲ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ

28/02/2021

ಮುಂಬೈ: ಮಹಿಳೆಯ ಸಾವಿನ ಆರೋಪದ ಮೇಲೆ ಮಹಾರಾಷ್ಟ್ರ ಸಚಿವರೋರ್ವರು ರಾಜೀನಾಮೆ ನೀಡಿದ್ದು,  23 ವರ್ಷ ವಯಸ್ಸಿನ ಯುವತಿಯ ಸಾವಿನ ಸಂಬಂಧ ಸಚಿವರ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.

ಫೆಬ್ರವರಿ 8ರಂದು ಪೂಜಾ ಚವ್ಹಾಣ್ ಎಂಬ  23 ವರ್ಷ ವಯಸ್ಸಿನ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಆತ್ಮಹತ್ಯೆಯ ಬೆನ್ನಲ್ಲೇ ಯುವತಿ ಹಾಗೂ ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಥೋಡ್ ಅವರು ಮಾತನಾಡುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿವೈರಲ್ ಆಗಿದೆ.

ಈ ಆಡಿಯೋದಲ್ಲಿ ಯುವತಿ ಸಾವಿನ ಬಗ್ಗೆ ಮಾತನಾಡುತ್ತಿದ್ದು, ಈ ಧ್ವನಿ  ಸಂಜಯ್ ರಾಥೋಡ್ ಅವರದ್ದು ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಅರಣ್ಯ ಸಚಿವ ಸಂಜಯ್ ರಾಥೋಡ್ ಸಚಿವಾಲಯಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿವೆ. ಇದೀಗ ಸಂಜಯ್ ರಾಥೋಡ್ ರಾಜೀನಾಮೆ ನೀಡಿದ್ದಾರೆ.

ಇನ್ನೂ ಪ್ರತಿಪಕ್ಷಗಳು ಮಾಡಿರುವ ಆರೋಪವನ್ನು ಸಚಿವರು ನಿರಾಕರಿಸಿದ್ದಾರೆ. ಆದರೆ ರಾಜೀನಾಮೆಗೆ ತೀವ್ರ ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

whatsapp

ಇತ್ತೀಚಿನ ಸುದ್ದಿ

Exit mobile version