ಯುವತಿಯ ಹತ್ಯೆ ಪ್ರಕರಣ: 24 ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಿದ ಪೊಲೀಸರು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಹಾಡಹಗಲೇ ಮನೆಯ ಮುಂಭಾಗದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯನ್ನು ಕೃತ್ಯ ನಡೆದ 24 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಕನಕಮಜಲು ನಿವಾಸಿ ಉಮೇಶ್ ಬಂಧಿತ ಆರೋಪಿ. ಮಂಗಳವಾರ ಮನೆಯಂಗಳದಲ್ಲಿದ್ದ ಕಂಪ ನಿವಾಸಿ ಗಿರಿಜಾ ಎಂಬುವವರ ಪುತ್ರಿ ಜಯಶ್ರೀ(23)ಯನ್ನು ಹೊಟ್ಟೆಗೆ ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿತ್ತು.
ಈ ವೇಳೆ ಜಯಶ್ರೀ ಹಿಂದೆ ಪ್ರೀತಿಸುತ್ತಿದ್ದ ಕನಕಮಜಲಿನ ಉಮೇಶ್ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತಳ ತಾಯಿ ಗಿರಿಜಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಮಂಗಳವಾರ ಬೆಳಗ್ಗೆ 11:30ರ ಸುಮಾರಿಗೆ ಈ ಕೊಲೆ ನಡೆದಿದೆ. ಮನೆಯ ಅಂಗಳದಲ್ಲಿದ್ದ ಜಯಶ್ರೀಯ ಹೊಟ್ಟೆಯ ಭಾಗಕ್ಕೆ ಯಾರೋ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ವೇಳೆ ಮಗಳ ಬೊಬ್ಬೆ ಕೇಳಿ ಪಕ್ಕದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ತಾಯಿ ಗಿರಿಜಾ ಓಡಿ ಬಂದಿದ್ದಾರೆ. ಆ ವೇಳೆ ಜಯಶ್ರೀ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw