ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ | ಐವರು ಅರೆಸ್ಟ್ - Mahanayaka
6:30 PM Wednesday 10 - September 2025

ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ | ಐವರು ಅರೆಸ್ಟ್

telangana
30/09/2021

ನಿಜಾಮಾಬಾದ್: ಡ್ರಾಪ್ ಕೊಡುವ ನೆಪದಲ್ಲಿ 20 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


Provided by

ಆರೋಪಿಗಳಲ್ಲಿ ಓರ್ವ ಯುವತಿಗೆ ಪರಿಚಯಸ್ಥ ಎನ್ನಲಾಗಿದೆ. ಈತ ಮನೆಗೆ ಡ್ರಾಪ್ ಕೊಡುತ್ತೇನೆ ಎಂದು ಯುವತಿಯನ್ನು ಬೈಕ್ ಹತ್ತಿಸಿಕೊಂಡಿದ್ದಾನೆ. ಆ ಬಳಿಕ ನಿಜಾಮಾಬಾದ್ ಡ್ರೈವ್ ಹೋಗೋಣ ಎಂದು ಹೇಳಿ ಆಕೆಯನ್ನು ಬಳಕೆಯಾಗದ ಆಸ್ಪತ್ರೆಯ ಕಟ್ಟಡವೊಂದಕ್ಕೆ ಕರೆದೊಯ್ದು ವಾಚ್ ಮನ್ ಕೊಠಡಿಯಲ್ಲಿ ಮೂವರು ಸೇರಿ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿಂತೆ ಸದ್ಯ ಅತ್ಯಾಚಾರ ನಡೆಸಿದ ಮೂವರು ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಇಬ್ಬರು ಸೇರಿದಂತೆ ಐವರ ವಿರುದ್ಧ ಸಾಮೂಹಿಕ ಅತ್ಯಾಚಾರ ತಡೆ, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಅರ್ಚಕನ ಮಾದಕ ಜಾಲ ಬಯಲು: ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕ ಅರೆಸ್ಟ್

ಉದ್ಯೋಗ ನೀಡುವ ಬದಲು, ಬಿಜೆಪಿ ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ | ಕುಮಾರಸ್ವಾಮಿ

ನೆಹರೂ ಒಪ್ಪಿದ್ದ ಆರೆಸ್ಸೆಸ್ ನ್ನು  ಕಾಂಗ್ರೆಸ್ ಒಪ್ಪಿಕೊಳ್ಳಲಿ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

ಸುಳ್ಯ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯಿಂದ ಅಂಬೇಡ್ಕರ್ ಅವರ ಜೀವನ ಕುರಿತ ಹಾಡು ಬಿಡುಗಡೆ

ವ್ಯಕ್ತಿಗೆ ಕೊವಿಡ್ ಲಸಿಕೆಯ ಬದಲು ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ನರ್ಸ್!

 

ಇತ್ತೀಚಿನ ಸುದ್ದಿ