ಯುವತಿಯನ್ನು ಚೂರಿಯಿಂದ ಇರಿದು ಬರ್ಬರ ಹತ್ಯೆ!
ಪುತ್ತೂರು: ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ನಡೆದಿದೆ.
ಮೃತಳನ್ನು ಜಯಶ್ರೀ(23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮಗಳ ಬೊಬ್ಬೆ ಕೇಳಿ ತೋಟದಲ್ಲಿದ್ದ ಗಿರಿಜಾ ಓಡಿ ಬಂದು ನೋಡಿದಾಗ ಜಯಶ್ರೀ ರಕ್ತದ ಮಡುವಲ್ಲಿ ಬಿದ್ದಿದ್ದಳೆನ್ನಲಾಗಿದೆ.
ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಜಯಶ್ರೀ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw