ಜಾತಿನಿಂದನೆ ಪ್ರಕರಣ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ - Mahanayaka
1:11 AM Wednesday 11 - December 2024

ಜಾತಿನಿಂದನೆ ಪ್ರಕರಣ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

yuvraj singh
18/10/2021

ಹಿಸಾರ್: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಯುವರಾಜ್ ಸಿಂಗ್(Yuvraj Singh ) ಅವರನ್ನು ಹೈಕೋರ್ಟ್ ಆದೇಶದ ಮೇರೆಗೆ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕಳೆದ ವರ್ಷ ಇನ್ ಸ್ಟಾಗ್ರಾಂ ಸಂವಾದವೊಂದರಲ್ಲಿ ಯುವರಾಜ್ ಸಿಂಗ್, ಕ್ರಿಕೆಟಿಗ ಯಜುವೇಂದ್ರ ಚಾಹಲ್ ಅವರಿಗೆ ಜಾತಿ ಹೆಸರಲ್ಲಿ ನಿಂದಿಸಿದ್ದರು. ಈ ಸಂಬಂಧ ಯುವರಾಜ್ ಅವರನ್ನು ಔಪಚಾರಿಕವಾಗಿ ಬಂಧಿಸಲಾಗಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಗಳ ಅನುಸಾರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಹನ್ಸಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿತಿಕಾ ಗಹ್ಲೌತ್ ಹೇಳಿದ್ದಾರೆ.

ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡಸಂಹಿತೆಯ ವಿವಿಧ ಕಲಂಗಳನ್ನು ಉಲ್ಲೇಖಿಸಿ ಹನ್ಸಿ ಠಾಣೆಯಲ್ಲಿ ರಜತ್ ಎಂಬುವವರು ದೂರು ನೀಡಿದ್ದರು. ಈ ಸಂಬಂಧ ಯುವರಾಜ್ ಮೇಲೆ ಎಫ್ ಐಆರ್ ದಾಖಲಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಧಾರ್ಮಿಕ ಬಲಾತ್ಕಾರ:  ಚರ್ಚ್ ಗೆ ನುಗ್ಗಿ ದುರ್ನಡತೆ ತೋರಿದ ಬಿಜೆಪಿ ಪರಿವಾರ

ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು

ಮಹಿಳೆಯೊಂದಿಗಿನ ತನ್ನ ಖಾಸಗಿ ಚಿತ್ರವನ್ನು ವಾಟ್ಸಾಪ್ ಗ್ರೂಪ್ ಗೆ ಶೇರ್ ಮಾಡಿದ ಶಿಕ್ಷಕ!

KSRTCಯಲ್ಲಿ ಕೆಲಸದ ಆಫರ್ ನೀಡಿ 500 ಮಂದಿಯನ್ನು ವಂಚಿಸಿದ ಇಬ್ಬರು ಅರೆಸ್ಟ್

BigNews: ಆರೆಸ್ಸೆಸ್ ನ ಹಿರಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಸಿಎಂ ಬೊಮ್ಮಾಯಿ ಅವರನ್ನು ನೋಡಲು ಬಂದ ಬಾಲಕನ ಮೇಲೆ ಪೊಲೀಸರಿಂದ ಹಲ್ಲೆ!

ಇತ್ತೀಚಿನ ಸುದ್ದಿ