ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ? - Mahanayaka

ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ?

mahantha narenra giri
22/09/2021

ಪ್ರಯಾಗ್ ರಾಜ್:  ಅಖಿಲ ಭಾರತ ಅಖಾಡ ಪರಿಷತ್ತ್ ನ ಅಧ್ಯಕ್ಷ ಮಹಾಂತ್ ನರೇಂದ್ರ ಗಿರಿ ಅವರ ಸಾವಿನ ಪ್ರಕರಣಕ್ಕೆ ರೋಚಕ ತಿರುವುದು ದೊರೆತಿದ್ದು, ಮಹಾಂತ್ ನರೇಂದ್ರ ಗಿರಿ ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮಾಹಿತಿಗಳ ಪ್ರಕಾರ ಮಹಾಂತ್ ನರೇಂದ್ರ ಗಿರಿ ಅವರು ಬರೆದಿದ್ದಾರೆನ್ನಲಾಗಿರುವ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಕಾರಣ ಏನು ಎನ್ನುವುದನ್ನು ಮಹಾಂತ್ ನರೇಂದ್ರ ಗಿರಿ ಬಹಿರಂಗ ಪಡಿಸಿದ್ದಾರೆನ್ನಲಾಗಿದೆ. ತನ್ನ ಮಾನಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನಗಳಾಗುತ್ತಿದ್ದು, ಹಾಗಾಗಿ ತಾನು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಯುವತಿಯೊಂದಿಗೆ ಅಸಭ್ಯವಾಗಿರುವಂತಹ ನನ್ನ ಫೋಟೋವನ್ನು ಬಿಡುಗಡೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ನಾನು ಗೌರವಯುತವಾಗಿ ಬದುಕಿದವನು. ಇಂತಹ ಅವಮಾನ ನನ್ನಿಂದ ಸಹಿಸಲು ಸಾಧ್ಯವಿಲ್ಲ. ಈ ಫೋಟೋಗಳನ್ನು ಕಂಪ್ಯೂಟರ್ ನಲ್ಲಿ ನಕಲಿಯಾಗಿ ತಯಾರಿಸಲಾಗಿದೆ ಎಂದಿರುವ ಸ್ವಾಮೀಜಿ ತನ್ನ ಶಿಷ್ಯ ಆನಂದ ಗಿರಿ ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಇನ್ನೂ ಸ್ವಾಮೀಜಿ ಬರೆದಿದ್ದಾರೆ ಎನ್ನಲಾಗಿರುವ ಡೆತ್ ನೋಟ್ ಬಗ್ಗೆ ಮಠದ ಶಿಷ್ಯಂದಿರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯನ್ನು ಮುಗಿಸಿ, ನಕಲಿ ಡೆತ್ ನೋಟ್ ಬರೆಯಲಾಗಿದೆ. ಇದು ಸ್ವಾಮೀಜಿಯ ಅಕ್ಷರ ಅಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಕೊಪ್ಪಳದಲ್ಲಿ ಅಸ್ಪೃಶ್ಯತಾ ಆಚರಣೆ ಪ್ರಕರಣ: ಐವರು ಕಿಡಿಗೇಡಿಗಳ ಅರೆಸ್ಟ್

ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ ಶುಲ್ಕ ಮನ್ನಾ | ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ

ಬೆಂಗಳೂರಿನ ಅಪಾರ್ಟ್​ಮೆಂಟ್ ನಲ್ಲಿ ಅಗ್ನಿ ಅವಘಡ: ತಾಯಿ, ಮಗಳು ಸಜೀವ ದಹನ

ವಿಷ ಸೇವಿಸಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಕಡಲತೀರದಲ್ಲಿ  ಆಕ್ರಮಣಕಾರಿ ‘ಟೈಗರ್ ಶಾರ್ಕ್’ನ ಕಳೇಬರ ಪತ್ತೆ

ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು

ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?

ಇತ್ತೀಚಿನ ಸುದ್ದಿ