ಯುವತಿಯನ್ನು ಅತ್ಯಾಚಾರ ಎಸಗಿ ಪರಾರಿಯಾದ ಗ್ರಾಮ ಲೆಕ್ಕಾಧಿಕಾರಿ! - Mahanayaka
8:20 AM Thursday 12 - December 2024

ಯುವತಿಯನ್ನು ಅತ್ಯಾಚಾರ ಎಸಗಿ ಪರಾರಿಯಾದ ಗ್ರಾಮ ಲೆಕ್ಕಾಧಿಕಾರಿ!

bangarapete
10/09/2021

ಬಂಗಾರಪೇಟೆ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಇದೀಗ ತಲೆಮರೆಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ತಾಲೂಕಿನ ಹುನ್ಕುಂದ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

 

ಗ್ರಾಮ ಲೆಕ್ಕಾಧಿಕಾರಿ ಅವಿನಾಶ್ ಕಾಂಬ್ಳೆ ಎಂಬಾತ, ಈ ಹಿಂದೆ ಕೆಜಿಎಫ್ ರಾಬರ್ಟ್ ಸನ್ ಪೇಟೆ ನಾಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೋರ್ವಳ ಜೊತೆಗೆ ಸ್ನೇಹ ಬೆಳೆಸಿದ್ದು, ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಬಳಿಕ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಹೇಳಲಾಗಿದೆ.

 

ಇನ್ನೂ ಈ ವಿಚಾರ ಪೋಷಕರಿಗೂ ತಿಳಿದಿದ್ದು, ಈ ಸಂಬಂಧ ಅವರು ಗಲಾಟೆ ನಡೆಸಿದಾಗ ಮದುವೆಯಾಗುವುದಾಗಿ ಆರೋಪಿ ಒಪ್ಪಿಕೊಂಡಿದ್ದ. ಆಗಸ್ಟ್ 27ರಂದು ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರ ಮದುವೆ ನಿಶ್ಚಿಯಿಸಲಾಗಿತ್ತು. ಆದರೆ, ರಿಜಿಸ್ಟ್ರಾರ್ ಕಚೇರಿಗೆ ಆರೋಪಿ ಆಗಮಿಸದೇ ಪರಾರಿಯಾಗಿದ್ದಾನೆ.

 

ಆರೋಪಿಯು ಪರಾರಿಯಾದ ಬೆನ್ನಲ್ಲೇ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

 

ಇನ್ನಷ್ಟು ಸುದ್ದಿಗಳು…

 

ಮತಾಂತರದ ಸುಳ್ಳು ಆರೋಪ ಹೊರಿಸಿ, ಗುಂಪಿನಿಂದ ದಾಂಧಲೆ: ಕ್ರಮಕ್ಕೆ ಆಗ್ರಹ

ಹುಡುಗಿಯರಿಗೆ ಉಚಿತ ಬ್ಯೂಟಿ ಪಾರ್ಲರ್, ಹಿರಿಯರಿಗೆ ತಂಬಾಕು, ಬೀಡಿ ಫ್ರೀ: ಗ್ರಾಪಂ ಅಭ್ಯರ್ಥಿಯ ಪ್ರಣಾಳಿಕೆ!

ಬಲೆಗೆ ಬಿದ್ದ ವಿಚಿತ್ರ ಬೃಹತ್ ಮೀನನ್ನು ಕಂಡು ಬೆಚ್ಚಿ ಬಿದ್ದ ಮೀನುಗಾರರು !

ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಕ್ಕೆ ರಾಡ್ ನುಗ್ಗಿಸಿದ ದುಷ್ಟರು: ಮಹಿಳೆಯ ಸ್ಥಿತಿ ಚಿಂತಾಜನಕ

ನಾನು ಕಾಶ್ಮೀರ್ ಪಂಡಿತ್, ನನ್ನ ಕುಟುಂಬ ಕಾಶ್ಮೀರ್ ಪಂಡಿತ್ | ರಾಹುಲ್ ಗಾಂಧಿ

ಬಾಗಿಲು ಮುಚ್ಚಿದ ಕಾರು ತಯಾರಿಕಾ ‘ಫೋರ್ಡ್’ ಸಂಸ್ಥೆ | ಎಷ್ಟು ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ ಗೊತ್ತಾ?

ಆ್ಯಂಕರ್ ಅನುಶ್ರೀ ವಿರುದ್ಧ ದಾಖಲೆ ರಹಿತ ಆರೋಪ | ಪ್ರಶಾಂತ್ ಸಂಬರ್ಗಿಯ ಬೆವರಳಿಸಿದ ಚಕ್ರವರ್ತಿ ಚಂದ್ರಚೂಡ್

ಆ್ಯಂಕರ್ ಅನುಶ್ರೀ ವಿರುದ್ಧ ದಾಖಲೆ ರಹಿತ ಆರೋಪ | ಪ್ರಶಾಂತ್ ಸಂಬರ್ಗಿಯ ಬೆವರಳಿಸಿದ ಚಕ್ರವರ್ತಿ ಚಂದ್ರಚೂಡ್

 

ಇತ್ತೀಚಿನ ಸುದ್ದಿ