ಝೀರೋ ಟ್ರಾಫಿಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡ  ಬೆಂಗಳೂರಿಗೆ ಶಿಫ್ಟ್

03/01/2021

ಬೆಂಗಳೂರು:  ಚಿತ್ರದುರ್ಗದಲ್ಲಿ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಝೀರೋ ಟ್ರಾಫಿಕ್ ನಲ್ಲಿ  ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ, ಬೆಂಗಳೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಿತ್ರದುರ್ಗ ಮೂಲಕ ಬೆಂಗಳೂರಿಗೆ ಹೊರಟಿದ್ದರು.  ಚಿತ್ರದುರ್ಗದಲ್ಲಿ ಊಟ ಮಾಡಲು ಇಲ್ಲಿನ ಹೊಟೇಲೊಂದರ ಬಳಿ ಕಾರಿನಿಂದ ಇಳಿದಿದ್ದು, ಕೆಲವೇ ನಿಮಿಷಗಳಲ್ಲಿ ಅವರು ಕುಸಿದು ಬಿದ್ದಿದ್ದರು. ಇದರಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ಸಕಾಲಕ್ಕೆ ಚಿಕಿತ್ಸೆ ದೊರಕಿದ ಹಿನ್ನೆಲೆಯಲ್ಲಿ ಅವರು ಚೇತರಿಸಿಕೊಂಡಿದ್ದರು. ಆ ಬಳಿಕ ಕಾರ್ಯಕರ್ತರ ಜೊತೆ ಅವರು ಮಾತನಾಡಿದ್ದರು, ಕುಟುಂಬಸ್ಥರ ಜೊತೆಗೂ ಮಾತನಾಡಿದ್ದರು. ಇದೀಗ ಹೆಚ್ಚಿನ ತಪಾಸಣೆಗಾಗಿ ಅವರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version